ಶಿವಮೊಗ್ಗದಲ್ಲಿ ಡಿಕೆಶಿ ಫೋಟೊಗೆ ಹಾಲಿನ ಅಭಿಷೇಕ, ಕಾರ್ಯಕರ್ತರಿಂದ ವಿಶೇಷ ಪೂಜೆ, ಪ್ರತಿಭಾ ಪುರಸ್ಕಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 MAY 2024

SHIMOGA : ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಅಭಿಮಾನಿಗಳು ನಗರದ ವಿವಿಧೆಡೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಹುಟ್ಟುಹಬ್ಬ (Birthday) ಆಚರಿಸಿದರು. ವಿವಿಧೆಡೆ ಪೂಜೆ ಸಲ್ಲಿಸಿ, ಸಿಹಿ ಹಂಚಲಾಯಿತು.

ಎಲ್ಲೆಲ್ಲಿ ಹೇಗಿತ್ತು ಸಂಭ್ರಮಾಚರಣೆ?

ವಿಶೇಷ ಪೂಜೆ : ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಡಿ.ಕೆ.ಶಿವಕುಮಾರ್‌ ಅವರಿಗೆ ಉತ್ತಮ ಆರೋಗ್ಯ, ಉನ್ನತ ಸ್ಥಾನ, ರಾಜ್ಯದ ಅಭಿವೃದ್ಧಿ ಕಾರ್ಯ ನಡೆಸುವ ಶಕ್ತಿ ನೀಡಲಿ ಎಂದು ದೇವರಿಗೆ ಪೂಜೆ ಸಲ್ಲಿಸಲಾಯಿತು. ಸಂಘಟನೆ ಜಿಲ್ಲಾಧ್ಯಕ್ಷ ವಿಜಯ್‌, ಕಾರ್ಯಾಧ್ಯಕ್ಷ ರವಿಕುಮಾರ್‌, ನಗರಾಧ್ಯಕ್ಷ ಚರಣ್‌, ಮಧುಸೂದನ್‌, ಚೇತನ್‌, ರವಿಕುಮಾರ್‌ ಸೇರಿದಂತೆ ಹಲವರು ಇದ್ದರು.

DK Shivakumar BIrthday - nsui

ಕೇಕ್‌ ಕತ್ತರಿಸಿ ಆಚರಣೆ : ನಗರದ ತಾಯಿ ಮನೆ ಆಶ್ರಮದಲ್ಲಿ ಕೆಪಿಸಿಸಿ ಶಿವಮೊಗ್ಗ ಗ್ರಾಮಾಂತರ ಸಂಯೋಜಕಿ ನೇತ್ರಾವತಿ ಅವರ ನೇತೃತ್ವದಲ್ಲಿ ಮಕ್ಕಳ ಜೊತೆಗೆ ಕೇಕ್‌ ಕತ್ತರಿಸಲಾಯಿತು. ಪ್ರಮುಖರಾದ ರವಿಕುಮಾರ್‌, ಸುರೇಶ್‌ ಕೋಟೇಕರ್‌, ಪ್ರದೀಪ್‌, ಕೃಷ್ಣಮೂರ್ತಿ, ರಾಮಕೃಷ್ಣ ಸೇರಿದಂತೆ ಹಲವರು ಇದ್ದರು.

DK Shivakumar BIrthday - Devendrappa K

ಹಾಲಿನ ಅಭಿಷೇಕ, ಸಿಹಿ ಹಂಚಿಕೆ : ಡಿ.ಕೆ.ಶಿವಕುಮಾರ್‌ ಬ್ರಿಗೇಡ್‌ ಮತ್ತು ಐಎನ್‌ಟಿಯುಸಿ ಮಹಿಳಾ ಘಟಕದ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಡಿ.ಕೆ.ಶಿವಕುಮಾರ್‌ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ನೆರವೇರಿಸಲಾಯಿತು. ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು. ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಐಎನ್‌ಟಿಯುಸಿ ಜಿಲ್ಲಾಧ್ಯಕ್ಷೆ ಕವಿತಾ ರಾಘವೇಂದ್ರ, ಮಾಜಿ ಉಪ ಮೇಯರ್‌ ಹೆಚ್‌.ಪಾಲಾಕ್ಷಿ, ಪ್ರಮುಖರಾದ ಬಾಬು ಮುನ್ನಾ, ನೇತ್ರಾವತಿ, ಜಮೀಲ್‌ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಜೈನ್‌ ಶಾಲೆ ವಿದ್ಯಾರ್ಥಿ ಜಿಲ್ಲೆಗೆ ಟಾಪರ್‌ | ಇವತ್ತಿನಿಂದ ಪಿಇಎಸ್‌ನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನಜೈನ್‌ ಶಾಲೆ ವಿದ್ಯಾರ್ಥಿ ಜಿಲ್ಲೆಗೆ ಟಾಪರ್‌ | ಇವತ್ತಿನಿಂದ ಪಿಇಎಸ್‌ನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ

ಪ್ರತಿಭಾ ಪುರಸ್ಕಾರ : ಡಿ.ಕೆ.ಶಿವಕುಮಾರ್‌ ಅಭಿಮಾನಿ ಬಳಗದ ವತಿಯಿಂದ ಪ್ರತಿಭಾ ಪುರಸ್ಕಾರ, ಹಿರಿಯ ಕಾಂಗ್ರೆಸ್‌ ಮುಖಂಡರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದೇ ವೇಳೆ ಹಿರಿಯ ಕಾಂಗ್ರೆಸ್‌ ಮುಖಂಡರನ್ನು ಸನ್ಮಾನಿಸಲಾಯಿತು. ಸೂಡ ಅಧ್ಯಕ್ಷ ಹೆಚ್.ಎಸ್.ಸುಂದರೇಶ್‌, ಚಂದ್ರಭೂಪಾಲ್‌, ಅಭಿಮಾನಿಗಳ ಸಂಘದ ಪ್ರಮುಖ ಮೋಹನ್‌ ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment