ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 MAY 2024
SHIMOGA : ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ನಗರದ ವಿವಿಧೆಡೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬ (Birthday) ಆಚರಿಸಿದರು. ವಿವಿಧೆಡೆ ಪೂಜೆ ಸಲ್ಲಿಸಿ, ಸಿಹಿ ಹಂಚಲಾಯಿತು.
ಎಲ್ಲೆಲ್ಲಿ ಹೇಗಿತ್ತು ಸಂಭ್ರಮಾಚರಣೆ?
ವಿಶೇಷ ಪೂಜೆ : ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಡಿ.ಕೆ.ಶಿವಕುಮಾರ್ ಅವರಿಗೆ ಉತ್ತಮ ಆರೋಗ್ಯ, ಉನ್ನತ ಸ್ಥಾನ, ರಾಜ್ಯದ ಅಭಿವೃದ್ಧಿ ಕಾರ್ಯ ನಡೆಸುವ ಶಕ್ತಿ ನೀಡಲಿ ಎಂದು ದೇವರಿಗೆ ಪೂಜೆ ಸಲ್ಲಿಸಲಾಯಿತು. ಸಂಘಟನೆ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿಕುಮಾರ್, ನಗರಾಧ್ಯಕ್ಷ ಚರಣ್, ಮಧುಸೂದನ್, ಚೇತನ್, ರವಿಕುಮಾರ್ ಸೇರಿದಂತೆ ಹಲವರು ಇದ್ದರು.

ಕೇಕ್ ಕತ್ತರಿಸಿ ಆಚರಣೆ : ನಗರದ ತಾಯಿ ಮನೆ ಆಶ್ರಮದಲ್ಲಿ ಕೆಪಿಸಿಸಿ ಶಿವಮೊಗ್ಗ ಗ್ರಾಮಾಂತರ ಸಂಯೋಜಕಿ ನೇತ್ರಾವತಿ ಅವರ ನೇತೃತ್ವದಲ್ಲಿ ಮಕ್ಕಳ ಜೊತೆಗೆ ಕೇಕ್ ಕತ್ತರಿಸಲಾಯಿತು. ಪ್ರಮುಖರಾದ ರವಿಕುಮಾರ್, ಸುರೇಶ್ ಕೋಟೇಕರ್, ಪ್ರದೀಪ್, ಕೃಷ್ಣಮೂರ್ತಿ, ರಾಮಕೃಷ್ಣ ಸೇರಿದಂತೆ ಹಲವರು ಇದ್ದರು.

ಹಾಲಿನ ಅಭಿಷೇಕ, ಸಿಹಿ ಹಂಚಿಕೆ : ಡಿ.ಕೆ.ಶಿವಕುಮಾರ್ ಬ್ರಿಗೇಡ್ ಮತ್ತು ಐಎನ್‌ಟಿಯುಸಿ ಮಹಿಳಾ ಘಟಕದ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಡಿ.ಕೆ.ಶಿವಕುಮಾರ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ನೆರವೇರಿಸಲಾಯಿತು. ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು. ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಐಎನ್‌ಟಿಯುಸಿ ಜಿಲ್ಲಾಧ್ಯಕ್ಷೆ ಕವಿತಾ ರಾಘವೇಂದ್ರ, ಮಾಜಿ ಉಪ ಮೇಯರ್ ಹೆಚ್.ಪಾಲಾಕ್ಷಿ, ಪ್ರಮುಖರಾದ ಬಾಬು ಮುನ್ನಾ, ನೇತ್ರಾವತಿ, ಜಮೀಲ್ ಸೇರಿದಂತೆ ಹಲವರು ಇದ್ದರು.
ಪ್ರತಿಭಾ ಪುರಸ್ಕಾರ : ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಪ್ರತಿಭಾ ಪುರಸ್ಕಾರ, ಹಿರಿಯ ಕಾಂಗ್ರೆಸ್ ಮುಖಂಡರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದೇ ವೇಳೆ ಹಿರಿಯ ಕಾಂಗ್ರೆಸ್ ಮುಖಂಡರನ್ನು ಸನ್ಮಾನಿಸಲಾಯಿತು. ಸೂಡ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಚಂದ್ರಭೂಪಾಲ್, ಅಭಿಮಾನಿಗಳ ಸಂಘದ ಪ್ರಮುಖ ಮೋಹನ್ ಉಪಸ್ಥಿತರಿದ್ದರು.
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






