ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 27 ಡಿಸೆಂಬರ್ 2019
ಪೌರತ್ವ ಕಾಯ್ದೆ ಕುರಿತು ಭಾರತೀಯ ಮುಸ್ಲಿಮರು ಹೆದರುವ ಅಗತ್ಯವಿಲ್ಲ. ಯಾಕೆಂದರೆ ಇದು ಪೌರತ್ವ ಕೊಡುವ ಕಾಯ್ದೆಯೇ ಹೊರತು, ಯಾರ ಪೌರತ್ವವನ್ನು ಕಸಿಯುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಬಿ.ವೈ.ರಾಘವೇಂದ್ರ, ಅಖಂಡ ಭಾರತದ ಭಾಗವಾಗಿರುವ ಪಾಕಿಸ್ತಾನ, ಅಪಘಾನಿಸ್ಥಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಾಗಿರುವ ಆರು ಧರ್ಮಿಯರಿಗೆ ಪೌರತ್ವ ನೀಡಲಾಗುತ್ತದೆ. ಇದರಿಂದ ಭಾರತೀಯ ಮುಸ್ಲಿಮರು ಹೆದರುವ ಅಗತ್ಯವಿಲ್ಲ ಎಂದರು.
ಭಾರತದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಎಷ್ಟಿದೆ ಗೊತ್ತಾ?
ಸ್ವಾತಂತ್ರ್ಯ ನಂತರ ಪಾಕಿಸ್ತಾನದಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದ ಅಲ್ಪಸಂಖ್ಯಾತರ ಸಂಖ್ಯೆ ಶೇ.3ಕ್ಕೆ ಇಳಿದಿದೆ. ಆದರೆ ಭಾರತದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ. ಯಾಕೆಂದರೆ ಭಾರತದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇದೆ. ಇಲ್ಲಿನ ಅಲ್ಪಸಂಖ್ಯಾತರು ರಾಷ್ಟ್ರಪತಿಯಾಗಿದ್ದಾರೆ. ರಾಜ್ಯಪಾಲರು, ಐಎಎಸ್, ಐಪಿಎಸ್ ಅಧಿಕಾರಿಗಳಾಗಿದ್ದಾರೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ಜಡ್ಜ್’ಗಳಾಗಿದ್ದಾರೆ ಎಂದರು.
ಶಾಂತಿ ಭಂಗ ಮಾಡುತ್ತಿವೆ ಕಾಂಗ್ರೆಸ್, ಕಮ್ಯುನಿಸ್ಟ್
ಪೌರತ್ವ ಕಾಯ್ದೆಯ ಕುರಿತು ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳ ನಾಯಕರು ಗೊಂದಲ ಸೃಷ್ಟಿಸಿ, ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದ್ದಾರೆ. ಗಲಭೆ ಸೃಷ್ಟಿಸಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಸಂಸದ ರಾಘವೇಂದ್ರ ಆರೋಪಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ, ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ, ಪ್ರಮುಖರಾದ ಎಂ.ಬಿ.ಭಾನುಪ್ರಕಾಶ್, ಗಿರೀಶ್ ಪಟೇಲ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಪ್ರಮುಖರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422