ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ನವೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್’ಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರು ಇವತ್ತು ಮತ್ತೊಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಬಿ-ಫಾರಂ ಜೊತೆಗೆ ಹೆಚ್ಚುವರಿ ನಾಮಪತ್ರ ಸಲ್ಲಿಸಲಾಗಿದೆ.

ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ, ಸಾಗರ ಶಾಸಕ ಹರತಾಳು ಹಾಲಪ್ಪ ಅವರೊಂದಿಗೆ ತೆರಳಿ ಡಿ.ಎಸ್.ಅರುಣ್ ಅವರು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಎಸ್.ಅರುಣ್ ಅವರು ನಾಮಪತ್ರ ಸಲ್ಲಿಸಿದರು.
‘ವಿಜೇತ ಎಂಎಲ್ಸಿ ಅಭ್ಯರ್ಥಿ’
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಹತ್ತು ವಿಧಾನ ಸಭೆ ಕ್ಷೇತ್ರದ ಪೈಕಿ ಒಂಭತ್ತು ಮಂದಿ ಬಿಜೆಪಿ ಶಾಸಕರಿದ್ದೇವೆ. ಇಬ್ಬರು ಸಂಸದರಿದ್ದಾರೆ. ಗ್ರಾಮ ಪಂಚಾಯಿತಿ, ನಗರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಅತಿ ಹೆಚ್ಚು ಸದಸ್ಯರನ್ನು ಬಿಜೆಪಿ ಹೊಂದಿದೆ. ಆದ್ದರಿಂದ ನಮ್ಮ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ ಎಂದು ತಿಳಿಸಿದರು.
‘ನಮ್ಮ ಗೆಲುವು ಕಾಂಗ್ರೆಸಿಗರಿಗೂ ಗೊತ್ತು’
ಶಾಸಕ ಹರತಾಳು ಹಾಲಪ್ಪ ಮಾತನಾಡಿ, ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಅನ್ನುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಪಕ್ಷದವರಿಗೂ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ ಅನ್ನುವುದು ಗೊತ್ತಿದೆ ಎಂದು ಹೇಳಿದರು.
ಡಿ.ಎಸ್.ಅರುಣ್ ಅವರು ನಾಮಪತ್ರ ಸಲ್ಲಿಸುವ ಸಂದರ್ಭ ಬಿಜೆಪಿ ವಿವಿಧ ಮುಖಂಡರು ಹಾಜರಿದ್ದರು.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






