SHIVAMOGGA LIVE NEWS | HINDU| 28 ಏಪ್ರಿಲ್ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಳೆದ ಮೂರು ತಿಂಗಳಿಂದ ಶಿವಮೊಗ್ಗ ನಗರದಲ್ಲಿ ಅಶಾಂತಿ ಸೃಷ್ಟಿಸಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ನಗರ ಘಟಕ ಆಗ್ರಹಿಸಿದೆ.
ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರಿಗೆ ಬಿಜೆಪಿ ನಗರ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ ಏನಿದೆ?
ಪ್ರಶಾಂತವಾಗಿದ್ದ ಶಿವಮೊಗ್ಗ ನಗರದಲ್ಲಿ ಕಳೆದ 3 ತಿಂಗಳಿಂದ ಅಶಾಂತಿ ಸೃಷ್ಟಿಸಲಾಗುತ್ತಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ಮತ್ತು ಅಮಾಯಕ ಹಿಂದೂಗಳ ಮೇಲೆ ನಿರಂತರ ಹಲ್ಲೆ ನಡೆಸಲಾಗುತ್ತಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಹಿಜಾಬ್ ವಿವಾದದ ನಂತರ ಶಿವಮೊಗ್ಗ ನಗರದಲ್ಲಿ ಹಲ್ಲೆ ನಡೆಸಲಾಗುತ್ತಿದೆ. ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯ ರಾಹುಲ್ ಮತ್ತು ಸಚಿನ್ ಮೇಲೆ ಹಲ್ಲೆಯಾಯಿತು. ನಂತರ ಹರ್ಷ ಕೊಲೆ, ಅನುಪಿನಕಟ್ಟೆಯಲ್ಲಿ ಇಬ್ಬರು ಹಿಂದೂ ಯುವಕರ ಮೇಲೆ ಹಲ್ಲೆ, ಟಿಪ್ಪುನಗರದ ಮಂಜುನಾಥ ಬಡಾವಣೆ ವೆಂಕಟೇಶ್ ಎಂಬುವವರ ಮೇಲೆ ಹಲ್ಲೆ, ಗೋಪಾಲಗೌಡ ಬಡಾವಣೆ ಡೈರಿಯ ನಾಗರಾಜ್ ಮೇಲೆ ಹಲ್ಲೆ, ಅಶೋಕನಗರದಲ್ಲಿ ನೀರಾವರಿ ಇಲಾಖೆಯ ಸಂತೋಷ್, ಬಜರಂಗದಳ ಕಾರ್ಯಕರ್ತ ಭರತ್’ಗೆ ಕೊಲೆ ಬೆದರಿಕೆ, ಎಂಕೆಕೆ ರಸ್ತೆಯಲ್ಲಿ ಅಕ್ಷಯ್ ಜೋಯ್ಸ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಗಳು ವರದಿಯಾಗಿವೆ.
ಹಿಂದೂಗಳ ಮೇಲೆ ಹಲ್ಲೆ ನಡೆಸುತ್ತಿರುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು.
ಇದನ್ನೂ ಓದಿ – ನೊಟೀಸ್ ಕೊಟ್ಟ ಸಿಐಡಿ ಅಧಿಕಾರಿ ಅಮಾನತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






