ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 24 SEPTEMBER 2024 : ಮೂಡ ಹಗರಣ ಸಂಬಂಧ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಅಂದಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ (Prostest) ನಡೆಸಲಾಯಿತು.
ಗೋಪಿ ಸರ್ಕಲ್‌ನ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದ ಬಿ.ವೈ.ರಾಘವೇಂದ್ರ, ಗೋಪಿ ಸರ್ಕಲ್‌ನಲ್ಲಿ ಕಾರ್ಯಕರ್ತರೊಂದಿಗೆ ರಸ್ತೆ ಮೇಲೆ ಕುಳಿತು ಘೋಷಣೆ ಕೂಗಿದರು. ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಸೇರಿ ಹಲವರು ಅವರೊಂದಿಗೆ ರಸ್ತೆ ಮೇಲೆ ಕುಳಿತು ಪ್ರತಿಭಟಿಸಿದರು.» ಸರ್ಕಲ್ ಮಧ್ಯೆ ಕುಳಿತ ಎಂಪಿ

ಇದೇ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್‌ನ ಡಿಎನ್‌ಎನಲ್ಲಿಯೆ ಭ್ರಷ್ಟಾಚಾರವಿದೆ. ಕೇಂದ್ರದಲ್ಲಿ 2ಜಿ ಹಗರಣ, ರಫೇಲ್, ಬೋಫೋರ್ಸ್ ಸೇರಿ ಹಗರಣಗಳ ಸರಮಾಲೆಯೇ ಇದೆ. ಹಾಗಾಗಿಯೇ ಅವರನ್ನು ಕಾಂಗ್ರೆಸ್ ಪಕ್ಷವನ್ನು ಜನರು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದೆ. ಮೂಡ ಹಗರಣ ಸಂಬಂಧ ಬಿಜೆಪಿ ಹೋರಾಟ ಮಾಡಿದರೂ ಮೊಂಡುತನ ಪ್ರದರ್ಶಿಸಿದ್ದರು. ರಾಜ್ಯಪಾಲರ ವಿರುದ್ಧವೆ ಮಾತನಾಡಿದರು. ಈ ಹಿಂದೆ ಸಿದ್ದರಾಮಯ್ಯ ಅವರ ವಿರುದ್ಧ ಹೂಬ್ಲೆಟ್ ವಾಚ್ ಹಗರಣ ಕೇಳಿ ಬಂದಿತ್ತು. ಅಗ ನಾವೇ ವಾಚ್ ಬಿಚ್ಚಿಸಿದ್ದೆವು. ಎಲ್ಲರಿಗು ಒಂದೇ ಕಾನೂನು. ನಮ್ಮ ಹೋರಾಟಕ್ಕೆ ಈಗ ನ್ಯಾಯ ಸಿಕ್ಕಿದೆ ಎಂದರು.» ನಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕಿದೆ

ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಧನಂಜಯ ಸರ್ಜಿ, ಮೋಹನ್ ರೆಡ್ಡಿ, ದೀನದಯಾಳು, ನಾಗರಾಜ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗದಿಂದ ದೆಹಲಿಗೆ ವಿಮಾನ, ಮುಂಬೈಗೆ ಯಾಕೆ ಸಿಕ್ತಿಲ್ಲ ಕ್ಲಿಯರೆನ್ಸ್? ಸಂಸದರು ಹೇಳಿದ್ದೇನು?
LATEST NEWS
- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















