ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA LIVE NEWS | 14 ಡಿಸೆಂಬರ್ 2021
ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಮುನ್ನಡೆ ಸಾಧಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಿಂಧು, ಅಸಿಂಧು ಮತಗಳನ್ನು ಬೇರ್ಪಡಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. 14 ಟೇಬಲ್’ಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.
ಆರಂಭಿಕ ಹಂತದಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಅವರು ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಪಕ್ಷವಾರು ಮತಗಳ ಕುರಿತು ಇನ್ನಷ್ಟೆ ಮಾಹಿತಿ ಲಭ್ಯವಾಗಿದೆ.
ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರು ಕಾಂಗ್ರೆಸ್, ಜೆಡಿಯು ಮತ್ತು ಪಕ್ಷೇತರ ಅಭ್ಯರ್ಥಿಗಳಿಗಿಂತಲೂ ಹೆಚ್ಚು ಮತಗಳನ್ನು ಪಡೆದು, ಗೆಲುವಿನ ಗೆರೆ ದಾಟಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಬಿಜೆಪಿ ಶಾಸಕರು ಡಿ.ಎಸ್.ಅರುಣ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ಇನ್ನು, ಡಿ.ಎಸ್.ಅರುಣ್ ಅವರು ಮುನ್ನಡೆ ಸಾಧಿಸಿರುವ ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಮತ ಎಣಿಕೆ ಕೇಂದ್ರದ ಮುಂದೆ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರ ಪರವಾಗಿ ಘೋಷಣೆ ಕೂಗುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422