ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 SEPTEMBER 2023
SHIMOGA : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯ ಆರೋಪಗಳೇನು?
ಮಳೆ ಇಲ್ಲದೆ ಬೆಳೆ ಹಾನಿಯಾಗಿದೆ. ಕೂಡಲೆ ಬರಗಾಲಪೀಡಿತ ಜಿಲ್ಲೆ ಘೋಷಣೆ ಮಾಡಬೇಕು. ಅನಿಯಮಿತ ಲೋಡ್ ಶೆಡ್ಡಿಂಗ್‌ನಿಂದ ಪಂಪ್‌ಸೆಟ್‌ಗಳಿಂದ ನೀರೆತ್ತಲಾಗದೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಅಡಿಕೆ ಎಲೆಚುಕ್ಕೆ ರೋಗದ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳದಿರುವುದು. ರೈತಪರ ಯೋಜನೆಗಳನ್ನು ರದ್ದುಗೊಳಿಸಿರುವುದು, ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಯಲು ಸರ್ಕಾರ ವಿಫಲವಾಗಿರುದು ಸೇರಿದಂತೆ ವಿವಿಧ ರೈತ ವಿರೋಧಿ ಕ್ರಮ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯಾರೆಲ್ಲ ಏನೇನು ಹೇಳಿದರು?
ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ : ಹೊಲ ಗದ್ದೆಗೆ ಹೋಗಿ ರೈತರ ಸಂಕಷ್ಟ ಅರಿಯಬೇಕು. ಆದರೆ ಸಿಎಂ, ಡಿಸಿಎಂ ಅವರು ಗ್ಯಾರಂಟಿ ಯೋಜನೆಗಳ ಮೂಲಕ ಹಣ ಹೊಡೆಯುವುದು ಹೇಗೆ ಎಂದು ಯೋಚಿಸುತ್ತಿದ್ದಾರೆ. ರಾಜ್ಯದಲ್ಲಿ 130 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿ ಇದೆ. ಆದರೆ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ.
ಬಿ.ವೈ.ರಾಘವೇಂದ್ರ, ಸಂಸದ : ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಬರ ಬರುತ್ತದೆ ಎಂದು ಮತ್ತೆ ಸಾಬೀತಾಗಿದೆ. ಬಿಜೆಪಿ ಸರ್ಕಾರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ನೀಡುತ್ತಿತ್ತು. ಈಗ ರೈತರಿಗೆ ನೀರು, ವಿದ್ಯುತ್ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಪರಿಹಾರದ ಹಣಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಉಡಾಫೆಯ ಹೇಳಿಕೆ ನೀಡುತ್ತಿದ್ದಾರೆ.
ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಎಸ್.ರುದ್ರೇಗೌಡ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಾಲೇಕೊಪ್ಪ ರಾಮಚಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನ್ಸಂಟ್ ರೋಡ್ರಿಗಸ್ ಸೇರಿದಂತೆ ಹಲವರು ಇದ್ದರು.
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





