ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಡಿಸೆಂಬರ್ 2021
ವಿಧಾನಸಭೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಅತ್ಯಾಚಾರ ಸಂಬಂಧ ನೀಡಿದ ಹೇಳಿಕೆ ಖಂಡಿಸಿ, ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮಹಿಳಾ ಮೋರ್ಚಾ ಕಾರ್ಯಕರ್ತೆಯರು, ರಮೇಶ್ ಕುಮಾರ್ ಅವರು ಸ್ಪೀಕರ್ ಆಗಿದ್ದಾಗ ಸದನದಲ್ಲಿ ‘ಅತ್ಯಾಚಾರಕ್ಕೊಳಗಾದ ಮಹಿಳೆಯ ಪರಿಸ್ಥಿತಿಯಂತಾಗಿದೆ’ ಎಂದು ಹೀನ ಹೇಳಿಕೆ ನೀಡಿದ್ದರು. ಈಗಲೂ ಅದೇ ರೀತಿಯ ಹೇಳಿಕೆ ನೀಡಿ ಸ್ತ್ರೀ ಕುಲಕ್ಕೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಸುರೇಖಾ ಮುರಳೀಧರ್ ಅವರು, ವಿಧಾನಸಭೆ ಎಂಬುದು ಪೂಜ್ಯ ಸ್ಥಳ. ಜನರು ಆರಿಸಿ ಕಳುಹಿಸಿರುವ ಸದಸ್ಯರು ಗೌರವಯುತವಾಗಿ ನಡೆದುಕೊಳ್ಳಬೇಕು. ಆದರೆ ರಮೇಶ್ ಕುಮಾರ್ ಅವರು ಮುಗ್ದರಲ್ಲ, ಪೆದ್ದರಲ್ಲ. ಅನುಭವಿ ರಾಜಕಾರಣಿ. ಅಂತಹವರಿಗೆ ನಾವು ಬುದ್ದಿ ಹೇಳಿಕೊಡಬೇಕಾಗಿದೆ ಎಂದು ಆರೋಪಿಸಿದರು.
ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವಿದ್ಯಾ ಲಕ್ಷ್ಮೀಪತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















