ಶಿವಮೊಗ್ಗದಲ್ಲಿ ಮಹಿಳೆಯರ ಪ್ರತಿಭಟನೆ, ಸರ್ಕಾರದ ವಿರುದ್ಧ ಆಕ್ರೋಶ, ಕಾರಣವೇನು?

 ಶಿವಮೊಗ್ಗ  LIVE 

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಸುಜಾತಾ ಹಂಡಿ ಅವರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ಶಿವಮೊಗ್ಗ ನಗರ ಬಿಜೆಪಿ ಮಹಿಳಾ ಮೋರ್ಚಾದ (Mahila Morcha) ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ » ಆನಂದಪುರ ಬಳಿ ನೇಣು ಬಿಗಿದುಕೊಂಡಿದ್ದ KSRTC ಚಾಲಕ ಶಿವಮೊಗ್ಗದಲ್ಲಿ ಸಾವು, ಕಾರಣವೇನು?

ಬಂಧನದ ಸಮಯ ಪೊಲೀಸರು ಮಹಿಳಾ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ, ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದು ಮಹಿಳೆಯರ ಘನತೆಗೆ ಧಕ್ಕೆ ತರುವ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿ ಘಟನೆಯ ಬಗ್ಗೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು. ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ.

BJP-Mahila-Morcha-Protest-against-Hubli-Incident

ಮಹಿಳಾ ಮೋರ್ಚಾ ನಗರಾಧ್ಯಕ್ಷೆ ರಶ್ಮೀ ಶ್ರೀನಿವಾಸ್‌, ಪ್ರಧಾನ ಕಾರ್ಯದರ್ಶಿ ಯಶೋದ ವೈಷ್ಣವ್‌, ನಿರ್ಮಲಾ, ಪ್ರಮುಖರಾದ ಸುಮಲತಾ ಭೂಪಾಳಂ, ಶಾಂತಾ ಸುರೇಂದ್ರ, ಮಧುರಾ ಶಿವಾನಂದ್, ವೀಣಾ ನಾಗರಾಜ್, ಸುಮಿತ್ರ, ಚೈತ್ರಾ ಪೈ, ಮಂಜುಳಾ ಶ್ರೀನಿವಾಸ್ ಸೇರಿ ಹಲವರು ಇದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment