ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಆಗಸ್ಟ್ 2020
ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಮೂರು ಸ್ಥಾಯಿ ಸಮಿತಿಗೆ ಬಿಜೆಪಿ ಸದಸ್ಯರನ್ನು ನೇಮಿಸಲಾಗಿದೆ. ಅಧ್ಯಕ್ಷರ ಈ ನಡೆ ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾರನ್ನೆಲ್ಲ ನೇಮಿಸಲಾಗಿದೆ?
ಸಾಮಾಜಿಕ ನ್ಯಾಯ ಸ್ಥಾಯಿ ಸಿಮಿತಿ ಅಧ್ಯಕ್ಷರಾಗಿ ಆನವೇರಿ ಕ್ಷೇತ್ರದ ವೀರಭದ್ರಪ್ಪ ಪೂಜಾರ್, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿಗೆ ನಗರ ಕ್ಷೇತ್ರದ ಸುರೇಶ್ ಸ್ವಾಮಿರಾವ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಗೆ ಸುಣ್ಣದಕೊಪ್ಪ ಕ್ಷೇತ್ರದ ರೇಣುಕಾ ಹನುಮಂತಪ್ಪ ಅವರನ್ನು ನೇಮಿಸಲಾಗಿದೆ.
ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವೇನು?
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಜ್ಯೋತಿ ಎಸ್.ಕುಮಾರ್ ಅವರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದಾರೆ. ಆದರೆ ಮೈತ್ರಿ ಧರ್ಮ ಪಾಲಿಸದೆ, ಮೂರು ಸ್ಥಾಯಿ ಸಮಿತಿಗೆ ಬಿಜೆಪಿ ಸದಸ್ಯರನ್ನು ನೇಮಕ ಮಾಡಿರುವುದು, ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ. ಅಧ್ಯಕ್ಷರು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಏಕಾಂಗಿಯಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]