ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 20 ಸೆಪ್ಟೆಂಬರ್ 2019
ದೇಶದಲ್ಲಿ ಒಂದೇ ಕಾನೂನು, ಒಂದೇ ಸಂವಿಧಾನ ಎಂಬ ಸಿದ್ಧಾಂತವನ್ನು ಇಟ್ಟುಕೊಂಡೇ ಹುಟ್ಟಿರುವ ಬಿಜೆಪಿ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ತೆಗೆದು ಹಾಕುವ ಮೂಲಕ ಏಕತೆಯನ್ನು ಸಾರಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಹೇಳಿದರು

ಅಂಬೇಡ್ಕರ್ ಭವನದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಒಂದೆ ದೇಶ ಒಂದೆ ಸಂವಿಧಾನ ಪ್ರಬುದ್ಧತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಂಘದ ಕಾಲದಿಂದಲೂ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ತೆಗೆದು ಹಾಕುತ್ತೇವೆ ಎಂಬ ಘೋಷಣೆ ಮಾಡಿದ್ದೆವು. ಆದರೆ, ಅದು 2019ರ ಆ.5ರಂದು ನೆರವೇರಿತು. ಸ್ವಾತಂತ್ರ್ಯ ಬಂದು 72 ವರ್ಷಗಳ ನಂತರ ಜಮ್ಮು ಕಾಶ್ಮೀರದಲ್ಲಿದ್ದ ಪ್ರತ್ಯೇಕತಾವಾದವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಒಂದು ದೇಶದಲ್ಲಿ ಎರಡು ರಾಷ್ಟ್ರಧ್ವಜ ಇರಬಾರದು. ಈ ನಿಲುವಿನೊಂದಿಗೆ ಹಲವರು ಹೋರಾಟ ನಡೆಸಿದ್ದರು. ಈಗ ಅವರ ಆಶಯ ಈಡೇರಿದೆ. 370ನೆ ವಿಧಿಗೆ ತಿದ್ದುಪಡಿ ತಂದು ಒಂದು ದೇಶ, ಒಂದು ಸಂವಿಧಾನವನ್ನು ಸಾಕಾರಗೊಳಿಸಲಾಗಿದೆ. ಇನ್ನು, ಕಾಶ್ಮೀರ ವಿಚಾರವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ಥಾನಕ್ಕೆ ಸೋಲಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮಾಜಿ ಶಾಸಕರಾದ ಎಂ.ಬಿ.ಭಾನುಪ್ರಕಾಶ್, ಆರ್.ಕೆ. ಸಿದ್ದರಾಮಣ್ಣ, ಉಪಮೇಯರ್ ಎಸ್.ಎನ್. ಚನ್ನಬಸಪ್ಪ, ಎಸ್.ದತ್ತಾತ್ರಿ, ಡಿ.ಎಸ್. ಅರುಣ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com

