ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 NOVEMBER 2023
SHIMOGA : ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಬಿ.ವೈ.ವಿಜಯೇಂದ್ರ ನ.29ರಂದು ಮೊದಲ ಭಾರಿ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆ ಬೃಹತ್ ಬೈಕ್ ಜಾಥ ಮತ್ತು ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೇಘರಾಜ್, ನಗರದ ಬೆಕ್ಕಿನ ಕಲ್ಮಠದಿಂದ ತೆರೆದ ವಾಹನದಲ್ಲಿ ರಜ್ಯಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಎರಡು ಸಾವಿರಕ್ಕೂ ಹೆಚ್ಚು ಬೈಕ್‌ಗಳು ಜಾಥಾದಲ್ಲಿ ಭಾಗವಹಿಸಲಿವೆ. ಪಿಇಎಸ್ ಕಾಲೇಜು ಪ್ರೇರಣಾ ಸಭಾಂಗಣದವರೆಗೆ ಜಾಥಾ ನಡೆಯಲಿದೆ ಎಂದರು.
ಇದನ್ನೂ ಓದಿ – ಹುತಾತ್ಮ ಯೋಧರಿಗೆ ಅಪಮಾನ, ಶಾಸಕರು ಕ್ಷಮೆ ಕೇಳಬೇಕೆಂದು ರಾಘವೇಂದ್ರ ಆಗ್ರಹ
ಪ್ರೇರಣಾ ಸಭಾಂಗಣದಲ್ಲಿ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸಲಾಗುತ್ತದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ಚರಪ್ಪ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ವಿಧಾನ ಪರಷತ್ ಸದಸ್ಯರಾದ ರುದ್ರೇಗೌಡ, ಡಿ.ಎಸ್.ಅರುಣ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






