ಶಿವಮೊಗ್ಗದಲ್ಲಿ ವಿಜಯೇಂದ್ರ ಸ್ವಾಗತಕ್ಕೆ ಸಿದ್ಧತೆ, ಸಾವಿರ ಸಾವಿರ ಬೈಕ್‌ಗಳ ಜೊತೆ ಮೆರವಣಿಗೆ, ಎಲ್ಲೆಲ್ಲಿ ಸಾಗುತ್ತೆ ಜಾಥಾ?

SHIVAMOGGA LIVE NEWS | 28 NOVEMBER 2023 (ಈ ಸುದ್ದಿಯನ್ನು ಇನ್ನು 39 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಬಿ.ವೈ.ವಿಜಯೇಂದ್ರ ನ.29ರಂದು ಮೊದಲ ಭಾರಿ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆ ಬೃಹತ್ ಬೈಕ್ ಜಾಥ ಮತ್ತು ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದರು‌.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೇಘರಾಜ್, ನಗರದ ಬೆಕ್ಕಿನ ಕಲ್ಮಠದಿಂದ ತೆರೆದ ವಾಹನದಲ್ಲಿ ರಜ್ಯಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಎರಡು ಸಾವಿರಕ್ಕೂ ಹೆಚ್ಚು ಬೈಕ್‌ಗಳು ಜಾಥಾದಲ್ಲಿ ಭಾಗವಹಿಸಲಿವೆ. ಪಿಇಎಸ್ ಕಾಲೇಜು ಪ್ರೇರಣಾ ಸಭಾಂಗಣದವರೆಗೆ ಜಾಥಾ ನಡೆಯಲಿದೆ ಎಂದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಹುತಾತ್ಮ ಯೋಧರಿಗೆ ಅಪಮಾನ, ಶಾಸಕರು ಕ್ಷಮೆ ಕೇಳಬೇಕೆಂದು ರಾಘವೇಂದ್ರ ಆಗ್ರಹ

ಪ್ರೇರಣಾ ಸಭಾಂಗಣದಲ್ಲಿ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸಲಾಗುತ್ತದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ಚರಪ್ಪ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ವಿಧಾನ ಪರಷತ್ ಸದಸ್ಯರಾದ ರುದ್ರೇಗೌಡ, ಡಿ.ಎಸ್.ಅರುಣ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

BY-Vijayendra-flex-in-Shimoga-city.

Leave a Comment