ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020
ಬೆಂಗಳೂರು ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಗಲಭೆ ಮಾಡಿ, ಆಸ್ತಿಪಾಸ್ತಿ ಹಾನಿಗೊಳಿಸಿದವರಿಗೆ ಗುಲ್ಲು ಶಿಕ್ಷಯಂತಹ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ನಗರ ಘಟಕದ ಕಾರ್ಯಕರ್ತರು, ದುಷ್ಕರ್ಮಿಗಳು ಸಂಚು ರೂಪಿಸಿ ಸತತ ಆರು ಗಂಟೆ ದಾಂಧಲೆ ನಡೆಸಿದ್ದಾರೆ. ಈ ರಾಕ್ಷಸಿ ಕೃತ್ಯವನ್ನು ಎಲ್ಲರೂ ಖಂಡಿಸಬೇಕು. ದಾಂಧಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ದಾಂಧಲೆ ಹಿಂದೆ ಎಸ್‍ಡಿಪಿಐ ಸಂಘಟನೆ ಇರುವುದು ಬಹಿರಂಗವಾಗಿದೆ. ಇನ್ನಷ್ಟು ಕಾಣದ ಕೈಗಳು ಇದರ ಹಿಂದೆ ಇದೆ. ಷಡ್ಯಂತ್ರ ನಡೆಸಿದವರನ್ನು ಕೂಡಲೆ ಬಂಧಿಸಿ, ಪ್ರಕರಣದ ತನಿಖೆಯನ್ನು ಉನ್ನತ ಮಟ್ಟದ ತನಿಖಾ ತಂಡಕ್ಕೆ ವಹಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಬಿಜೆಪಿ ಶಿವಮೊಗ್ಗ ನಗರ ಅಧ್ಯಕ್ಷ ಎನ್.ಕೆ.ಜಗದೀಶ್, ಪ್ರಧಾನ ಕಾರ್ಯದರ್ಶಿ ಮೋಹನ್ ರೆಡ್ಡಿ, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
https://www.facebook.com/liveshivamogga/videos/934829990355472/?t=0
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]