ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 3 ಜನವರಿ 2022
ಮುಖ್ಯಮಂತ್ರಿ ಅವರು ಭಾಗವಹಿಸಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಗೂಂಡಾಗಿರಿ ಪ್ರದರ್ಶಿಸಿದ ಸಂಸದ ಡಿ.ಕೆ.ಸುರೇಶ್ ನಡೆ ಖಂಡಿಸಿ, ಶಿವಮೊಗ್ಗ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ ಡಿ.ಕೆ.ಸುರೇಶ್ ಅವರ ಪ್ರತಿಕೃತಿಯನ್ನು ದಹಿಸಿ, ಆಕ್ರೋಶ ವ್ಯಕ್ತಪಡಿಸಲಾಯಿತು.
ಗೋಪಿ ಸರ್ಕಲ್’ನಲ್ಲಿ ಬಿಜೆಪಿ ನಗರ ಘಟಕ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ ಡಿ.ಕೆ.ಸುರೇಶ್ ಅವರ ನಡೆಯನ್ನು ಬಿಜೆಪಿ ಮುಖಂಡರು ಖಂಡಿಸಿದರು.
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ದತ್ತಾತ್ರಿ, ನಾಡಪ್ರಭು ಕೆಂಪೆಗೌಡ ಅವರ ಪ್ರತಿಮೆಯನ್ನು ಬಿಜೆಪಿ ಸರ್ಕಾರ ನಿರ್ಮಾಣ ಮಾಡಿದೆ. ಒಕ್ಕಲಿಗರ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಸಂಸದ ಡಿ.ಕೆ.ಸುರೇಶ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಗೂಂಡಾಗಿರಿ ಮಾಡುತ್ತಿದ್ಧಾರೆ ಎಂದು ಆರೋಪಿಸಿದರು.
ಬಿಜೆಪಿ ನಗರಾಧ್ಯಕ್ಷ ಜಗದೀಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ, ಮೇಯರ್ ಸುನೀತಾ ಅಣ್ಣಪ್ಪ ಸೇರಿದಂತೆ ಹಲವು ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವಿಡಿಯೋ ನ್ಯೂಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422