SHIVAMOGGA LIVE NEWS | 30 DECEMBER 2022
ಶಿವಮೊಗ್ಗ : ಪಾಕಿಸ್ತಾನದಲ್ಲಿ ಹಿಂದೂ ಮಹಿಳೆಯ (hindu woman) ಬರ್ಬರ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿ, ಶಿಕ್ಷೆಗೊಳಪಡಿಸಬೇಕು. ಅಲ್ಲದೆ ಪಾಕಿಸ್ತಾನದಲ್ಲಿರುವ ಹಿಂದೂಗಳ ರಕ್ಷಣೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ತರುವಂತೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಪಾಕಿಸ್ತಾನದ ಸಿಂಝೋರ್ ಎಂಬಲ್ಲಿ ದಯಾಬೇಲ್ ಎಂಬ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರ್ಚ್ ತಿಂಗಳಲ್ಲಿ ಹಿಂದೂ ಯುವತಿಯೊಬ್ಬಳನ್ನು (hindu woman) ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪಾಕಿಸ್ತಾನದಲ್ಲಿ ಹಿಂದೂಗಳ ರಕ್ಷಣೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ತರಬೇಕು ಎಂದು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಇದೆ ವೇಳೆ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ಸುರೇಖಾ ಮುರಳೀಧರ್ ಅವರು, ಪಾಕಿಸ್ತಾನದಲ್ಲಿ ಅತ್ಯಂತ ಹೀನಾಯವಾಗಿ ಹಿಂದೂ ಮಹಿಳೆಯ ಹತ್ಯೆ ಮಾಡಲಾಗಿದೆ. ಈ ಪ್ರಪಂಚ ಎತ್ತ ಸಾಗುತ್ತಿದೆ ಎಂದು ಯೋಚಿಸುವಂತಾಗಿದೆ. ದೇಶದಲ್ಲಿರುವ ಎಲ್ಲರು ಸುರಕ್ಷಿತವಾಗಿ ಇರಬೇಕು ಎಂಬ ಕಾರಣಕ್ಕೆ ಭಾರತದಲ್ಲಿ ಸಿಎಎ ಜಾರಿ ಮಾಡಲಾಯಿತು. ಆಗ ಹಲವರು ಇದನ್ನು ವಿರೋಧಿಸಿದ್ದರು. ಈಗ ಅದರ ಮಹತ್ವ ಅರಿವಾಗುತ್ತಿದೆ ಎಂದು ತಿಳಿಸಿದರು.
ಪ್ರಧಾನ ಕಾರ್ಯದರ್ಶಿ ರಶ್ಮಿ ಶ್ರೀನಿವಾಸ್, ಆರತಿ ಅ.ಮ.ಪ್ರಕಾಶ್, ರಶ್ಮಿ ಶಿವಕುಮಾರ್ ಹಾಗೂ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200