SHIVAMOGGA LIVE | 14 JUNE 2023
SHIMOGA : ವಿದ್ಯುತ್ ದರ (Power Price Hike) ಹೆಚ್ಚಳ ಖಂಡಿಸಿ ಶಿವಮೊಗ್ಗದ ಮೆಸ್ಕಾಂ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಈ ವೇಳೆ ಕೆಲವು ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ ಮತ್ತು ನೊಟೀಸ್ ಬೋರ್ಡ್ ಗಾಜಿಗೆ ಕಲ್ಲು ತೂರಾಟ ಮಾಡಿದರು.
ಇದನ್ನೂ ಓದಿ – ಶಿವಮೊಗ್ಗ ಮೆಸ್ಕಾಂ ಕಚೇರಿಗೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತರು, MLA ಸೇರಿ ಹಲವರು ವಶಕ್ಕೆ
ಬಿಜೆಪಿ ನಗರ ಘಟಕದ ವತಿಯಿಂದ ರೈಲ್ವೆ ನಿಲ್ದಾಣ ಸಮೀಪ ಇರುವ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಇದಕ್ಕೂ ಮೊದಲು ಪ್ರತಿಭಟನಾ ಸಭೆ ನಡೆಸಲಾಯಿತು. ಈ ವೇಳೆ ಬಿಜೆಪಿ ಮುಖಂಡರು ಮಾತನಾಡಿದರು.

ಯಾರೆಲ್ಲ ಏನೇನು ಹೇಳಿದರು?
ಈಗ ಸಂಸಾರಗಳು ಯಂತ್ರಗಳ ಮೇಲೆ ಅವಲಂಬಿತವಾಗಿವೆ. ಎಲ್ಲದಕ್ಕೂ ಮನೆಯಲ್ಲಿ ಯಂತ್ರಗಳನ್ನು ಉಪಯೋಗಿಸಲಾಗುತ್ತಿದೆ. 200 ಯುನಿಟ್ ವಿದ್ಯುತ್ ಉಚಿತವಾಗಿ ಕೊಡುತ್ತೇವೆ ಎಂದು ಹೇಳಿ, ಈಗ ಯಾವುದೇ ಯಂತ್ರಗಳನ್ನು ಉಪಯೋಗಿಸದ ಹಾಗೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಮಹಿಳೆಯರ ಸಂಕಷ್ಟ ಅರ್ಥ ಆಗುತ್ತಿಲ್ಲವೆ. ವಿದ್ಯುತ್ ದರ ಲಕ್ಷಾಂತರ ರೂ. ಹೆಚ್ಚಳ ಆಗುತ್ತಿರುವುದರಿಂದ ಕೈಗಾರಿಕೆಗಳು ಸಂಕಷ್ಟಕ್ಕೀಡಾಗಿವೆ. ಬೆಲೆ ಏರಿಕೆಯ ಪ್ರಸ್ತಾವನೆಯನ್ನಷ್ಟೇ ಮಾಡುವ ಇಂತಹ ಎಸ್ಕಾಂಗಳಿಗೆ ಬೀಗ ಹಾಕಬೇಕು.ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗ ಶಾಸಕ
ಸರ್ಕಾರ ರಚನೆಯಾಗಿ ಒಂದೇ ತಿಂಗಳಲ್ಲಿ ಬೀದಿಗಿಳಿಯುವ ಹಾಗೆ ಮಾಡಿದ್ದಾರೆ. ನಮ್ಮ ಸರ್ಕಾರ ಇದ್ದಾಗ ನಮ್ಮಲ್ಲಿ ಸಾಕಷ್ಟು ವಿದ್ಯುತ್ ಇದೆ. ಹೊರ ರಾಜ್ಯಕ್ಕೆ ಮಾರಾಟ ಮಾಡುತ್ತಿದ್ದೇವೆ ಎಂದು ಇಂಧನ ಸಚಿವರು ತಿಳಿಸಿದ್ದರು. ಪ್ರಸ್ತುತ ಕೈಗಾರಿಕೆಗಳಿಗೆ ಕಚ್ಛಾ ವಸ್ತು ಸಿಗುವುದು ಕಷ್ಟವಾಗಿದೆ. ಈಗ ಇಂಧನ ದರ ಹೆಚ್ಚಳದಿಂದ ಮತ್ತಷ್ಟು ಸಮಸ್ಯೆ ಆಗುತ್ತಿದೆ.ಎಸ್.ರುದ್ರೇಗೌಡ, ವಿಧಾನ ಪರಿಷತ್ ಸದಸ್ಯ
13 ಬಾರಿ ಬಜೆಟ್ ಮಂಡಿಸಿದ್ದ ಸಿದ್ದರಾಮಯ್ಯ ಅವರಿಗೆ ಗ್ಯಾರಂಟಿ ಕಾರ್ಡ್‌ಗೆ ಸಹಿ ಹಾಕುವಾಗ ಹಣಕಾಸು ಹೊಂದಾಣಿಕೆ ಬಗ್ಗೆ ಗೊತ್ತಿರಲಿಲ್ಲವೆ. ವಿದ್ಯುತ್ ದರ ಹೆಚ್ಚಳ ಏಪ್ರಿಲ್‌ನಿಂದ ಪೂರ್ವಾನ್ವಯ ಮಾಡಿದ್ದಾರೆ. ಇದನ್ನು ಪ್ರಶ್ನಿಸಿದರೆ ಸಿದ್ದರಾಮಯ್ಯ ಅವರು ಅಸಡ್ಡೆಯಿಂದ ಮಾತನಾಡುತ್ತಾರೆ. ಇಂತಹ ನಿರ್ಧಾರ ಹಿಂಪಡೆಯುವವರೆಗೆ ಹೋರಾಟ ಮಾಡುತ್ತೇವೆಡಿ.ಎಸ್.ಅರುಣ್, ವಿಧಾನ ಪರಿಷತ್ ಸದಸ್ಯ

ಹಿಂದಿನ ಬಿಜೆಪಿ ಸರ್ಕಾರ ಜನರಿಗೆ ಹೊರೆ ಮಾಡಬಾರದು ಎಂದು ಏರಿಕೆ ಪ್ರಸ್ತಾವವನ್ನು ತಡೆ ಹಿಡಿದಿತ್ತು. ಒಂದು ವೇಳೆ ಬಿಜೆಪಿ ಸರ್ಕಾರವೆ ದರ ಏರಿಕೆ ಮಾಡಿದ್ದರೆ ಅದನ್ನು ಹಿಂಪಡೆಯಲು ಆಗುವುದಿಲ್ಲವೆ. ಬಿಜೆಪಿ ಸರ್ಕಾರದ ಕಾನೂನು ಹಿಂಪಡೆಯುತ್ತೀವಿ ಅನ್ನುವವರು ಇದನ್ನೇಕೆ ಹಿಂಪಡೆಯಲ್ಲ. ಜಗದೀಶ್, ಬಿಜೆಪಿ ನಗರ ಅಧ್ಯಕ್ಷ
ಗ್ಯಾರಂಟಿ ಘೋಷಿಸಿ ಜನರಿಗೆ ಮಂಕುಬೂದಿ ಎರಚಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದಿದೆ. ಈಗ ಹಣಕಾಸು ಹೊಂದಿಸಲು ಸಾಧ್ಯವಾಗದೆ ದಿನಕ್ಕೊಂದು ಷರತ್ತು ವಿಧಿಸುತ್ತಿದೆ. ವಿದ್ಯುತ್ ದರ ಹೆಚ್ಚಳ ಮಾಡಿ ಜನರ ಮೇಲೆ ಹೊರೆ ಹಾಕಲಾಗುತ್ತಿದೆ. ಪ್ರತಿ ಯುನಿಟ್‌ಗೆ ಈ ಹಿಂದೆ 30-40 ಪೈಸೆ ಹೆಚ್ಚಳ ಮಾಡುತ್ತಿದ್ದರು. ಈಗ 7 ರೂ. ಹೆಚ್ಚಳ ಮಾಡಿದ್ದಾರೆ.ದತ್ತಾತ್ರಿ, ಸೂಡ ಮಾಜಿ ಅಧ್ಯಕ್ಷ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
shivamoggalive@gmail.com
» Whatsapp Number
7411700200