ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 27 ಜುಲೈ 2022
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ (MURDER) ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಶಿವಪ್ಪನಾಯಕ ಪ್ರತಿಮೆ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಬಿ.ಹೆಚ್.ರಸ್ತೆಯಲ್ಲಿ ರಸ್ತೆ ತಡೆ ಮಾಡಿದರು. ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದವರನ್ನು ಕೂಡಲೆ ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾಣ್ಣೀರು ಹಾಕಿದ ಕಾರ್ಪೊರೇಟರ್
ಪ್ರತಿಭಟನೆ ವೇಳೆ ಬಿಜೆಪಿ ಕಾರ್ಪೊರೇಟರ್ ಎಸ್.ಎನ್.ಚನ್ನಬಸಪ್ಪ ಕಣ್ಣೀರು ಹಾಕಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡುವಾಗ ಚನ್ನಬಸಪ್ಪ ಅವರು ಭಾವುಕರಾದರು. ಕೆಲವು ಕ್ಷಣ ಮಾತು ನಿಲ್ಲಿಸಿ ಕಣ್ಣಿರು ಹಾಕಿದರು.
‘ಹಿಂದೂ ಸಮಾಜದ ಯುವಕರ ಹತ್ಯೆ (MURDER) ಮಾಡಲಾಗುತ್ತಿದೆ. ನಾವು ಕಾನೂನು ಕ್ರಮ ಕೈಗೆತ್ತಿಕೊಳ್ಳಲು ಆಗುವುದಿಲ್ಲ. ಆದ್ದರಿಂದ ಸರ್ಕಾರವೆ ತಲ್ವಾರ್ ಕೊಡಲಿ. ಸ್ವಯಂ ರಕ್ಷಣೆ ಮಾಡಿಕೊಳ್ಳುತ್ತೇವೆ’ ಎಂದು ಚನ್ನಬಸಪ್ಪ ಆಗ್ರಹಿಸಿದರು.
ಸಂಘಟನೆಗೆ ಯಾರನ್ನೂ ನೆಚ್ಚಿಕೊಂಡಿಲ್ಲ
ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಅವರು ಮಾತನಾಡಿ, ನಾವು ಯಾವುದೆ ಸರ್ಕಾರವನ್ನು ನೆಚ್ಚಿಕೊಂಡು ಹಿಂದೂ ಸಂಘಟನೆ ಮಾಡುತ್ತಿಲ್ಲ. ಯಾವುದೆ ದುಷ್ಟ ಶಕ್ತಿಯು ಹಿಂದೂ ಸಂಘಟನೆ ಮೇಲೆ ಕಣ್ಣಿಡಲು ಬಿಡುವುದಿಲ್ಲ. ನಮ್ಮ ಕಾರ್ಯಕರ್ತರನ್ನು ಮೋಸದಿಂದ ಹೊಡೆಯುತ್ತಿದ್ದಾರೆ. ಆ ಸಮಾಜದ ಹಿರಿಯರು, ಧರ್ಮಗುರುಗಳು ಯುವಕರಿಗೆ ಬುದ್ದಿ ಹೇಳಬೇಕು ಎಂದರು.
ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಸೇರಿದಂತೆ ವಿವಿಧ ಮೋರ್ಚಾಗಳ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಪೊಲೀಸರಿಗೆ ಸಿಕ್ಕಿಬಿದ್ದ ಮೂವರು ಬರೀ ಬೈಕ್ ಕಳ್ಳರಾಗಿರಲಿಲ್ಲ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422