ಶಿವಮೊಗ್ಗ: ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ ಘಟನೆಗೆ ಪ್ರತಿಯಾಗಿ, ಬಿಜೆಪಿಯಿಂದ ಕೌಂಟರ್ ಪ್ರತಿಭಟನೆ ನಡೆಸಿತು. ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಯುವ ಮೋರ್ಚಾ ಕಾರ್ಯಕರ್ತರು ನುಗ್ಗಿ ಮೊಟ್ಟೆ ತೂರಿ ಆಕ್ರೋಶ ವ್ಯಕ್ತಪಡಿಸಿದರು.
ದಿಢೀರ್ ಮುತ್ತಿಗೆ, ಮೊಟ್ಟೆ ತೂರಾಟ
ಕಾಂಗ್ರೆಸ್ ಪ್ರತಿಭಟನೆಗೆ ತಿರುಗೇಟು ನೀಡಲು ಮುಂದಾದ ಬಿಜೆಪಿ ಕಾರ್ಯಕರ್ತರು ಏಕಾಏಕಿ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಆಕ್ರೋಶಗೊಂಡ ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿ ಮುಂದೆ ಹಾಕಲಾಗಿದ್ದ ಫ್ಲೆಕ್ಸ್ ಹರಿದು ಹಾಕಿದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ಕಚೇರಿ ಮೇಲೆ ಮೊಟ್ಟೆ ತೂರಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಪೊಲೀಸ್ ವಶಕ್ಕೆ ಬಿಜೆಪಿ ಕಾರ್ಯಕರ್ತರು
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನಲೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
