SHIVAMOGGA LIVE NEWS | 20 DECEMBER 2024
ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಮತ್ತು ಸಂಸತ್‌ನಲ್ಲಿ BJP ಸಂಸದರ ಮೇಲೆ ರಾಹುಲ್ ಗಾಂಧಿ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲಾಧ್ಯಕ್ಷ ಟಿ.ಡಿ. ಮೇಘರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು. ರಾಜ್ಯ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಯಾರೆಲ್ಲ ಏನೆಲ್ಲ ಹೇಳಿದರು?
ಸಿ.ಟಿ.ರವಿ ಅವರ ಮೇಲೆ ಉದ್ದೇಶ ಪೂರ್ವಕವಾಗಿ ಹಲ್ಲೆ ಮಾಡಲಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನ ಪಿ.ಎ ರೌದ್ರಾವತಾರ ತೋರಿದ್ದಾರೆ. ವಿಧಾನ ಸೌಧದಲ್ಲೇ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಸಿ.ಟಿ.ರವಿ ರಾಜ್ಯದ ನಾಯಕ. ಪ್ರಖರ ಹಿಂದುತ್ವವಾದಿ. ಅವರನ್ನು ಸದೆಬಡಿಯುವ ಪ್ರಯತ್ನ ನಡೆದಿದೆ. ನಾವು 40 ವರ್ಷಗಳಿಂದ ಸಿ.ಟಿ.ರವಿ ಅವರನ್ನು ನೋಡಿದ್ದೇವೆ. ಅವರು ಎಂದಿಗು ಇಂತಹ ಪದಗಳನ್ನು ಬಳಸಿಲ್ಲ.
ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗ ಶಾಸಕ
ಸಂಸತ್ತಿನಲ್ಲಿ ಪ್ರತಿಭಟನೆ ನೆಪದಲ್ಲಿ ಕಾಂಗ್ರೆಸಿಗರು ರಕ್ತ ಹರಿಸಿದ್ದಾರೆ. ರಾಹುಲ್ ಗಾಂಧಿ ಗೂಂಡಾ ವರ್ತನೆ ತೋರಿದ್ದಾರೆ. ರಾಜ್ಯದಲ್ಲಿ ಬಾಲಿಷ ಕಾರಣಕ್ಕೆ ಸಿ.ಟಿ.ರವಿ ಅವರನ್ನು ಬಂಧಿಸಲಾಗಿದೆ. ಸಿ.ಟಿ.ರವಿ ಮತ್ತು ಬಿಜೆಪಿಯ ಬೆಳವಣಿಗೆ ಸಹಿಸದೆ ಸರ್ಕಾರ ಈ ಕೃತ್ಯ ಎಸಗಿದೆ. ವಾಲ್ಮೀಕಿ ನಿಗಮ, ಭೋವಿ ನಿಗಮ, ಮೂಡ ಹಗರಣಗಳಿಂದ ಗಮನ ಬೇರೆಡೆ ಸೆಳೆಯಲು ಈ ಪ್ರಯತ್ನ ಮಾಡಿದ್ದಾರೆ.
ಟಿ.ಡಿ.ಮೇಘರಾಜ್, ಬಿಜೆಪಿ ಜಿಲ್ಲಾಧ್ಯಕ್ಷ
ಕಾಂಗ್ರೆಸ್ ಪಕ್ಷ 106 ಬಾರಿ ಸಂವಿಧಾನ ಪರಿಷ್ಕರಣೆ ಮಾಡಿದೆ. ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷ ಈಗ ವಿಧಾನ ಪರಿಷತ್ತಿನಲ್ಲೂ ತುರ್ತು ಪರಿಸ್ಥಿತಿ ನಿರ್ಮಿಸಿದೆ. ಬಿಜೆಪಿ ಕಾರ್ಯಕರ್ತರು ಜಗ್ಗುವುದಿಲ್ಲ, ಕುಗ್ಗುವುದಿಲ್ಲ. ಮೂಡ ಹಗರಣದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸಿದಂತೆ ಈಗಲು ಮಧ್ಯ ಪ್ರವೇಶ ಮಾಡಬೇಕು.
ಡಾ. ಧನಂಜಯ ಸರ್ಜಿ, ವಿಧಾನ ಪರಿಷತ್ ಸದಸ್ಯ
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ಸುದ್ದಿ