ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 OCTOBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ (Stone Pelting) ನಡೆಸಿದ ಘಟನೆ ಖಂಡಿಸಿ ಅ.12ರಂದು ಬೆಳಿಗ್ಗೆ 11ಕ್ಕೆ ಬಾಲರಾಜ್ ಅರಸ್ ರಸ್ತೆಯ ಮಥುರಾ ಪ್ಯಾರಡೈಸ್ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟಿ.ಡಿ.ಮೇಘರಾಜ್, ಪ್ರತಿಭಟನೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಆರಗ ಜ್ಞಾನೇಂದ್ರ, ಬಿ.ವೈ.ವಿಜಯೇಂದ್ರ, ಎಸ್.ಎನ್.ಚನ್ನಬಸ್ಪ ಪಾಲ್ಗೊಳ್ಳುವರು ಎಂದರು.
ಇದನ್ನೂ ಓದಿ – ವೀರಶೈವ ಲಿಂಗಾಯತ ಸಮುದಾಯ ಶಾಮನೂರು ಹೇಳಿಕೆಗೆ ಧ್ವನಿಗೂಡಿಸಬೇಕು
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ರಾಗಿಗುಡ್ಡದಲ್ಲಿ ನಡೆದದ್ದೂ ಇದೇ. ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಓಲೈಸುತ್ತಿದೆ ಎಂದು ಆರೋಪಿಸಿದರು.
ಪ್ರಮುಖರಾದ ಎಸ್.ದತ್ತಾತ್ರಿ, ಶಿವರಾಜ್, ಬಿ.ಕೆ.ಶ್ರೀನಾಥ್, ಹೃಷಿಕೇಶ್ ಪೈ, ಜಗದೀಶ್, ವಿಶ್ವಾಸ್, ಶಶಿಧರ್, ಕೆ.ವಿ. ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿ ಇದ್ದರು.