ವಿನೋಬನಗರದಲ್ಲಿ ಯಡಿಯೂರಪ್ಪ ಮನೆ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 NOVEMBER 2023

SHIMOGA : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ (BY Vijayendra) ಆಯ್ಕೆ ಹಿನ್ನೆಲೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ವಿನೋಬನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಘೋಷಣೆಗಳನ್ನು ಕೂಡಿ ಕಾರ್ಯಕರ್ತರು ಸಂಭ್ರಮಾಚರಿಸಿದರು. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಕಾರ್ಯಕರ್ತರು ಎತ್ತಿ ಕುಣಿದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಮಾಜಿ ಸಿಎಂ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ (BY Vijayendra), ಬಿ.ವೈ.ರಾಘವೇಂದ್ರ ಪರವಾಗಿ ಘೋಷಣೆ ಕೂಗಿದರು.

ಅಕೌಂಟ್‌ಗೆ 79 ಸಾವಿರ ರೂ. ಹಾಕುತ್ತೇವೆ ಅಂದರು, ನಂತರ ಬಂದ SMS ನೋಡಿ ನಿವೃತ್ತ ಉದ್ಯೋಗಿಗೆ ಶಾಕ್

ಇದೇ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ದಕ್ಷಿಣ ಭಾರತದ ಬಿಜೆಪಿಯ ಕೋಟೆಗೆ ಹೊಸ ನೀರು ಬರಬೇಕು ಎಂಬ ಚಿಂತನೆಯೊಂದಿಗೆ ಯುವ ನಾಯಕ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಇದರಿಂದ ಸಂಘಟನೆಗೆ ಶಕ್ತಿಪೂರ್ವಕವಾದ ತೀರ್ಮಾನ ಎಂದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment