ಶಿವಮೊಗ್ಗ ಬಿಜೆಪಿ ಕಚೇರಿ ಮುಂಭಾಗ ವಂದೇ ಮಾತರಂ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ‘ವಂದೇ ಮಾತರಂ’ ಗೀತೆ ಹಾಡಿದರು. (Vande Mataram)

ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಹಿನ್ನೆಲೆ ದೇಶದೆಲ್ಲೆಡೆ ಗೀತೆ ಗಾಯನ ಮತ್ತು ಸಂಭ್ರಮದ ಆಚರಣೆಯಂತೆ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲೂ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾ ನಂತರದ ದೇಶಪ್ರೇಮದ ಕಿಚ್ಚಿಗೆ ವಂದೇ ಮಾತರಂ ಗೀತೆಯು ಪ್ರೇರಣೆ ನೀಡಿತು. ವಿಶ್ವದ ಅಪ್ರತಿಮ ನಾಯಕ ಮೋದಿ ಅವರು ದೇಶದ ಪ್ರಧಾನಿಯಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ರಕ್ತ ಹರಿಸಿ ಹುತಾತ್ಮರಾದವರ ಚರಿತ್ರೆಯ ಬಗ್ಗೆ ತಿಳಿಯುವ ಅವಶ್ಯಕತೆ ಇದೆ ಎಂದರು.

Vande-Mataram-song-in-front-of-BJP-Office-in-shimoga-city.

ಪಕ್ಷದ ಜಿಲ್ಲಾಧ್ಯಕ್ಷ ಎನ್‌.ಕೆ. ಜಗದೀಶ್, ಶಾಸಕ ಎಸ್.ಎನ್. ಚನ್ನಬಸಪ್ಪ, ಪ್ರಮುಖರಾದ ಜ್ಯೋತಿ ಪ್ರಕಾಶ್, ಟಿ.ಡಿ.ಮೇಘರಾಜ್, ಮೋಹನ್ ರೆಡ್ಡಿ, ಜ್ಞಾನೇಶ್ವ‌ರ್, ಎನ್. ಜೆ.ನಾಗರಾಜ್, ಮಾಲತೇಶ್, ಹರಿಕೃಷ್ಣ, ಸಂತೋಷ್ ಬಳ್ಳೆಕೆರೆ ಮತ್ತಿತರರು ಇದ್ದರು.

ಇದನ್ನೂ ಓದಿ » ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ ಬಂಧನಕ್ಕೆ ಒತ್ತಾಯ, ಕಾರಣವೇನು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment