ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಆಗಸ್ಟ್ 2020
ಬೆಂಗಳೂರು ಡಿಜೆ ಹಳ್ಳಿ ಮತ್ತು ಕಾವಲ್ ಭೈರಸಂದ್ರದಲ್ಲಿ ರಾತ್ರಿ ದಾಂಧಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಗಲಭೆಕೋರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಯುವ ಮೋರ್ಚಾ ಕಾರ್ಯಕರ್ತರು, ಶಾಸಕರ ಮನೆ ಮೇಲೆ ದಾಳಿ, ಸಾರ್ವಜನಿಕರ ಆಸ್ತಿಪಾಸ್ತಿ, ಪೊಲೀಸ್ ಠಾಣೆ ಮೇಲೆ ದಾಳಿ, ಮಾಧ್ಯಮದವರ ಮೇಲೆ ಹಲ್ಲೆ ನಡೆಸಲಾಗಿದೆ. ಉತ್ತರ ಪ್ರದೇಶದಲ್ಲಿ ಈ ರೀತಿ ಗಲಭೆ ಮಾಡಿದವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅದೇ ಮಾದರಿಯನ್ನು ಅನುಸರಿಸಬೇಕು ಮತ್ತು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ಮತ್ತೊಂದೆಡೆ ಧಾರವಾಡ ಜಿಲ್ಲೆಯ ಬೋಗೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಆಕೆಯ ಸಾವಿಗೆ ಕಾರಣನಾದ ಬಷೀರ್ ಎಂಬಾತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆಯ ವಿಡಿಯೋ ರಿಪೋರ್ಟ್ ಇಲ್ಲಿದೆ.
https://www.facebook.com/liveshivamogga/videos/340980173587803/?t=0
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]