ಶಿವಮೊಗ್ಗ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಯತ್ನ, ರಾಹುಲ್‌ ಗಾಂಧಿ ಪ್ರತಿಕೃತಿಗೆ ಬೆಂಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಿ ಪ್ರತಿಭಟನೆ ನಡೆಸಿರುವುದನ್ನು ಖಂಡಿಸಿ, ಶಿವಮೊಗ್ಗದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು (BJP Yuva Morcha) ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನಾಯಕರ ನಡೆ ದೇಶದ ಮಾನ ಹರಾಜು ಹಾಕುವಂತಿದೆ ಎಂದು ಆರೋಪಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಗೋಪಿ ಸರ್ಕಲ್‌ನಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯವರೆಗೆ ಪ್ರತಿಭಟನಾ ಜಾಥಾ ನಡೆಸಿದರು.

ಬ್ಯಾರಿಕೇಡ್‌ ಹಾಕಿ ತಡೆದ ಪೊಲೀಸ್‌

ಕಾಂಗ್ರೆಸ್‌ ಕಚೇರಿ ಇರುವ ಇಂದಿರಾ ಗಾಂಧಿ ರಸ್ತೆಯ ಆರಂಭದಲ್ಲೇ ಪೊಲೀಸರು ಬ್ಯಾರಿಕೇಡ್‌ ಹಾಕಿದ್ದರು. ಅಲ್ಲಿಗೆ ಆಗಮಿಸುತ್ತಿದ್ದಂತೆ ಬಿಜೆಪಿ ಯುವ ಮೋರ್ಚ ಕಾರ್ಯಕರ್ತರನ್ನು ತಡೆದರು. ಈ ವೇಳೆ ಬ್ಯಾರಿಕೇಡ್‌ ಹಾರಿ ಕಾಂಗ್ರೆಸ್‌ ಕಚೇರಿಯತ್ತ ನಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು  ಬಿಜೆಪಿ ಕಾರ್ಯಕರ್ತರನ್ನ ತಡೆದು, ಎಳೆದೊಯ್ದರು.

BJP-Yuva-Morcha-Protest-in-Shimoga-against-Rahul-Gandhi

ರಾಹುಲ್‌ ಗಾಂಧಿ ಪ್ರತಿಕೃತಿಗೆ ಬೆಂಕಿ ಇದೇ ವೇಳೆ ಬಿಜೆಪಿ ಕಾರ್ಯಕರ್ತರು ರಾಹುಲ್‌ ಗಾಂಧಿ ಪ್ರತಿಕೃತಿಯನ್ನು ತಂದು ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಬಾಲರಾಜ ಅರಸ್‌ ರಸ್ತೆ ಮಧ್ಯದಲ್ಲೆ ರಾಹುಲ್‌ ಗಾಂಧಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

BJP Yuva Morcha Protest in shimoga Against Rahul Gandhi
ಶಿವಮೊಗ್ಗ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು
b2
ಬ್ಯಾರಿಕೇಡ್‌ ಹಾಕಿ ಯುವ ಮೋರ್ಚಾ ಕಾರ್ಯಕರ್ತರನ್ನು ತಡೆದ ಪೊಲೀಸರು
b3
ಬಿಜೆಪಿ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದ ಪೊಲೀಸರು. ಕಾಂಗ್ರೆಸ್‌ ಕಚೇರಿಯತ್ತ ನುಗ್ಗಿದ ಬಿಜೆಪಿ ಕಾರ್ಯಕರ್ತ ವಶಕ್ಕೆ.
b4
ಬ್ಯಾರಿಕೇಡ್‌ ಹಾರಿ ಕಾಂಗ್ರೆಸ್‌ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
b5
ರಾಹುಲ್‌ ಗಾಂಧಿ ಪ್ರತಿಕೃತಿ ದಹಿಸಿದ ಬಿಜೆಪಿ ಕಾರ್ಯಕರ್ತರು
b6
ಕಾಂಗ್ರೆಸ್ ಕಚೇರಿ ಮೇಲೆ ನಿಂತು ಪ್ರತಿಭಟನೆ ವೀಕ್ಷಿಸಿದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆರ್‌.ಪ್ರಸನ್ನ ಕುಮಾರ್‌, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್‌.

ಇದನ್ನೂ ಓದಿ – ಕಾರ್ಯಕ್ರಮ ಮುಗಿಸಿ ಕುಟುಂಬದವರು ಮನೆಗೆ ಬಂದಾಗ ಬಾಗಿಲು ತೆರೆದಿತ್ತು, ತೀರ್ಥಹಳ್ಳಿಯಲ್ಲಿ ಕೇಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment