ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಎರಡು ದಿನ ಶಿವಮೊಗ್ಗ ಪ್ರವಾಸ (Tour) ಕೈಗೊಂಡಿದ್ದಾರೆ. ಫೆ.22 ಮತ್ತು 23ರಂದು ವಿವಿಧೆಡೆಗೆ ಭೇಟಿ ನೀಡಿಲಿದ್ದು, ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಫೆ.22ರಂದು ಇಂಟರ್‌ಸಿಟಿ ರೈಲಿನಲ್ಲಿ ಮಧ್ಯಾಹ್ನ 3.12ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಶಿವಮೊಗ್ಗ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಫೆ.23ರಂದು ತೀರ್ಥಹಳ್ಳಿಯ ಬೆಜ್ಜವಳ್ಳಿಯಲ್ಲಿ ಬೆಳಗ್ಗೆ 10.30ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಮಾಜದ ಸಭಾಭವನದ ಕಾಮಗಾರಿ ವೀಕ್ಷಿಸಲಿದ್ದಾರೆ. ತೀರ್ಥಹಳ್ಳಿಯಲ್ಲಿ ಮುಸ್ಲಿಂ ಒಕ್ಕೂಟ ಆಯೋಜಿಸಿರುವ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2ಕ್ಕೆ ಹೊಸನಗರದ ಸಂಕೂರಿನಲ್ಲಿರುವ ವಾಯುಪಡೆ ಅಧಿಕಾರಿ ಮಂಜುನಾಥ್ ಗೋರಗದ್ದೆ ಅವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ಸಂಜೆ 4 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಫೆ.24ರಂದು ಮಧ್ಯಾಹ್ನ 2.15ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಇದನ್ನೂ ಓದಿ » ಕುಂಸಿ, ಅರಸಾಳು ನಿಲ್ದಾಣಗಳಲ್ಲಿ ಎರಡು ಎಕ್ಸ್‌ಪ್ರೆಸ್ ರೈಲುಗಳ ಸ್ಟಾಪ್ ಮುಂದುವರಿಕೆ, ಯಾವ್ಯಾವ ರೈಲುಗಳು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200