SHIVAMOGGA LIVE NEWS | 27 FEBRURARY 2023
SHIMOGA : ವಿಮಾನ ನಿಲ್ದಾಣ ಕಾಮಗಾರಿಗೆ ಜಮೀನು ಬಿಟ್ಟುಕೊಟ್ಟ ರೈತರಿಗೆ ಭರವಸೆಯಂತೆ ಪರಿಹಾರ ನೀಡದಿರುವುದನ್ನು ಖಂಡಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ ಅವರ ನೇತೃತ್ವದಲ್ಲಿ ಕಪ್ಪು ಬಾವುಟ (Black Flag) ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.
ಗೋಪಿ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಹುಣಸೋಡು ಸ್ಪೋಟ ಪ್ರಕರಣದ ಸಂತ್ರಸ್ತರು, ವಿಮಾನ ನಿಲ್ದಾಣಕ್ಕೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಭರವಸೆಯಂತೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಇದೆ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಇದನ್ನೂ ಓದಿ – ವಿಮಾನ ನಿಲ್ದಾಣದವರೆಗೆ ಪಾದಯಾತ್ರೆಗೆ ಪಟ್ಟು, ಭದ್ರಾವತಿಯಲ್ಲಿ ಪೊಲೀಸ್ ಸರ್ಪಗಾವಲು