ಶಿವಮೊಗ್ಗ ಲೈವ್
ಶಿವಮೊಗ್ಗ: ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಇಂದು ಬಾಂಬ್ ನಿಷ್ಕ್ರಿಯ ಮಾಕ್ ಡ್ರಿಲ್ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಅವರ ನೇತೃತ್ವದಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಬಾಂಬ್ ಪತ್ತೆ ದಳ, ಶ್ವಾನ ದಳ ಮತ್ತು ಪೊಲೀಸರು ಶಿವಮೊಗ್ಗ ವಿಮಾನ ನಿಲ್ದಾಣದ ವಿವಿಧೆಡೆ ಪರಿಶೀಲನೆ ನಡೆಸಿದರು. ವಿಮಾನ ನಿಲ್ದಾಣದ ಟರ್ಮಿನಲ್, ರನ್ ವೇ ಅಕ್ಕಪಕ್ಕ, ವಿಮಾನಯಾನ ಸಂಸ್ಥೆಯ ವಾಹನಗಳು, ಎಟಿಸಿ ಬಳಿ ಪರಿಶೀಲನೆ ನಡೆಸಲಾಯಿತು.

ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಶಮಂತ್, ಕೆಎಸ್‌ಐಐಡಿಸಿ ಅಧಿಕಾರಿಗಳು, ವಿಮಾನ ನಿಲ್ದಾಣದ ಭದ್ರತೆ ನಿರ್ವಹಿಸುತ್ತಿರುವ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: