ಜಿ.ಎಸ್.ಎನ್. ನೆನಪುಗಳು ಕೃತಿ ಬಿಡುಗಡೆಗೆ ದಿನಾಂಕ ನಿಗದಿ, ಯಾರೆಲ್ಲ ಬರ್ತಿದ್ದಾರೆ?

ಶಿವಮೊಗ್ಗ: ಹಿರಿಯ ನ್ಯಾಯವಾದಿ ಹಾಗೂ ಕಮ್ಯುನಿಸ್ಟ್ ಹೋರಾಟಗಾರ ಜಿ.ಎಸ್. ನಾಗರಾಜ್ ಅವರ ಜೀವನಾನುಭವಗಳನ್ನು ದಾಖಲಿಸಿರುವ ಜಿ.ಎಸ್.ಎನ್. ನೆನಪುಗಳು ಕೃತಿ ಬಿಡುಗಡೆ ಸಮಾರಂಭ ನ.14ರಂದು ಸಂಜೆ 5.30ಕ್ಕೆ ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ ಎಂದು ಹಿರಿಯ ವಕೀಲ ಕೆ.ಪಿ. ಶ್ರೀಪಾಲ್ ಹೇಳಿದರು. (ಈ ಸುದ್ದಿಯನ್ನು ಇನ್ನು 76 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿ.ಎಸ್. ನಾಗರಾಜ್ ಅವರ ಕಿರಿಯ ವಕೀಲರ ಬಳಗ ಕಾರ್ಯಕ್ರಮ ಆಯೋಜಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

Advocate-KP-Sripal-Press-Meet-in-Shimoga.

ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಕೃತಿ ಬಿಡುಗಡೆ ಮಾಡಲಿದ್ದಾರೆ. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಪ್ರಕಾಶ್ ಹಾಗೂ ಲೇಖಕ ಎಂ.ಎನ್. ಸುಂದರರಾಜ್ ಕೃತಿ ಕುರಿತು ಮಾತನಾಡಲಿದ್ದಾರೆ. ಹಿರಿಯ ನ್ಯಾಯವಾದಿ ಜಿ.ಎಸ್. ನಾಗರಾಜ್ ಉಪಸ್ಥಿತರಿರುವರು ಎಂದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣರಾವ್, ಹಿರಿಯ ನ್ಯಾಯವಾದಿ ಕೆ. ಬಸಪ್ಪಗೌಡ ಹಾಗೂ ಸಮಾಜವಾದಿ ನಾಯಕ ಪಿ. ಪುಟ್ಟಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ನಾಗರಾಜ್ ಅವರು ಐದು ದಶಕಗಳಿಗೂ ಹೆಚ್ಚು ಕಾಲ ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ರೈತರು, ಕಾರ್ಮಿಕರು, ದಲಿತರು ಹಾಗೂ ಶೋಷಿತರ ಪರವಾಗಿ ಹೋರಾಟ ನಡೆಸಿದ್ದಾರೆ. ಅವರ ಜೀವನದ ಆದರ್ಶಗಳು ಯುವ ವಕೀಲರಿಗೆ ಪ್ರೇರಣೆಯಾಗಬೇಕು ಎಂಬ ಉದ್ದೇಶದಿಂದ ಕೃತಿ ಪ್ರಕಟಿಸಲಾಗಿದೆ.

– ಕೆ.ಪಿ. ಶ್ರೀಪಾಲ್, ವಕೀಲ

ಆರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಬದುಕಿನಲ್ಲಿ ಮೌಲ್ಯ, ಬದ್ಧತೆ ಮತ್ತು ಸೈದ್ಧಾಂತಿಕ ನಿಷ್ಠೆಯೊಂದಿಗೆ ಮುನ್ನಡೆದ ನಾಗರಾಜ್ ಅವರ ಜೀವನಾನುಭವಗಳು ಯುವಜನತೆಗೆ ಸ್ಫೂರ್ತಿಯಾಗಲಿವೆ.

– ಎಂ.ಎನ್. ಸುಂದರರಾಜ್, ಲೇಖಕ

ಪತ್ರಿಕಾಗೋಷ್ಠಿಯಲ್ಲಿ ವಕೀಲರ ಸಂಘದ ಅಧ್ಯಕ್ಷ ಜಿ.ಆರ್. ರಾಘವೇಂದ್ರ, ಮಾಜಿ ಅಧ್ಯಕ್ಷ ಎನ್. ದೇವೇಂದ್ರಪ್ಪ, ಹಿರಿಯ ನ್ಯಾಯವಾದಿ ಎಂ.ಎಸ್. ಅನಂತದತ್ತ, ಎನ್‌ಇಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ. ನೃಪತುಂಗ, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ನಾರಾಯಣ್ ಹಾಗೂ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಹನುಮಕ್ಕ ಇದ್ದರು.