ಮುಗಿಯದ ಸ್ಮಾರ್ಟ್ ಸಿಟಿ ಅವಾಂತರ, ಗುಂಡಿಗೆ ಬಿದ್ದು ಬಾಲಕನ ಕಣ್ಣಿಗೆ ಪೆಟ್ಟು, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಟೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕನೊಬ್ಬ ಸ್ಮಾರ್ಟ್ ಸಿಟಿ ಚರಂಡಿಗೆ ಬಿದ್ದು ಗಾಯಗೊಂಡಿದ್ದಾನೆ. ಚರಂಡಿಗೆ ಸ್ಲಾಬ್ ಅಳವಡಿಸದೆ ಇರುವುದರಿಂದ ಘಟನೆ ಸಂಭವಿಸಿದೆ. ಸ್ಥಳೀಯರು ಮತ್ತು ಕೆಲಸಗಾರರು ಬಾಲಕನ ರಕ್ಷಣೆ ಮಾಡಿದ್ದಾರೆ.

Shimoga Nanjappa Hospital check list graphics

ಶಿವಮೊಗ್ಗದ ಹೊಸಮನೆ ಬಡಾವಣೆ ಸಮೀಪ ಜೈಲ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮೂರನೆ ತರಗತಿಯ ಓದುತ್ತಿರುವ ರಾಘವೇಂದ್ರ ಗಾಯಗೊಂಡಿರುವ ಬಾಲಕ.

ಜೈಲ್ ರಸ್ತೆಯಲ್ಲಿ ಹೊಸದಾಗಿ ಚರಂಡಿ ನಿರ್ಮಿಸಲಾಗಿದೆ. ಅಲ್ಲಲ್ಲಿ ಸ್ಲಾಬ್ ಅಳವಡಿಸದೆ ಹಾಗೆ ಬಿಡಲಾಗಿದೆ. ಟೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ರಾಘವೇಂದ್ರ ಗುಂಡಿಗೆ ಬಿದ್ದಿದ್ದಾನೆ. ಆತನ ಬಲಗಣ್ಣಿನ ಮೇಲ್ಭಾಗ ಪೆಟ್ಟು ಬಿದ್ದಿದೆ. ಸ್ಥಳೀಯರು ಕೂಡಲೆ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ಕಣ್ಣಿನ ಮೇಲ್ಭಾಗ ಹೊಲಿಗೆ ಹಾಕಲಾಗಿದೆ. ಕಣ್ಣು ಬಿಡಲಾಗದೆ ರಾಘವೇಂದ್ರ ನೋವು ಅನುಭವಿಸುತ್ತಿದ್ದಾನೆ. ಸ್ಮಾರ್ಟ್ ಸಿಟಿ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಬಾಲಕನ ಕುಟುಂಬದವರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ರಾಘವೇಂದ್ರ ಸ್ಮಾರ್ಟ್ ಸಿಟಿ ಚರಂಡಿಯೊಳಗೆ ಬೀಳುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ | ಕಣ್ಣು ಕಾಣದ ಯುವಕ ಬಿದ್ದ ಗುಂಡಿಗೂ, ಸ್ಮಾರ್ಟ್ ಸಿಟಿಗೂ ಸಂಬಂಧವಿಲ್ಲವಂತೆ

Shimoga Live Country Wise Reach

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment