ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಹೊಟೇಲ್‌ನಲ್ಲಿ (Hotel) ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ (ಇಬ್ಬರ ಹೆಸರು ಗೌಪ್ಯ) ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ. ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಲಾಗಿದೆ. ಈ ವೇಳೆ ಯುವತಿ ಬಳಿ ಇದ್ದ 24 ಸಾವಿರ ರೂ., ಹಣ, ಯುವಕನ ಮೊಬೈಲ್‌ನಿಂದ ಗೂಗಲ್ ಪೇ ಮೂಲಕ 1500 ರೂ. ಹಣ ವರ್ಗಾಯಿಸಿಕೊಂಡಿದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮತ್ತಷ್ಟು ಹಣಕ್ಕೆ ಡಿಮಾಂಡ್
ಯುವಕ ಮತ್ತು ಯುವತಿಯನ್ನು ಆಟೋದಲ್ಲಿ ಕರೆತಂದು ಎಂಆರ್‌ಎಸ್ ಸರ್ಕಲ್ ಬಳಿ ಬಿಟ್ಟು, ಅವರ ಬೈಕ್ ಕೊಟ್ಟು ಕಳುಹಿಸಲಾಗಿದೆ. ರಾತ್ರಿಯೊಳಗೆ ಒಂದೂವರೆ ಲಕ್ಷ ರೂ. ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಒಡ್ಡಿದಾರೆ ಎಂದು ಆರೋಪಿಸಲಾಗಿದೆ.

ಯುವಕನ ಮೇಲೆ ಹಲ್ಲೆ
ಯುವಕನಿಗೆ ಕರೆ ಮಾಡಿದ್ದ ಅಪರಿಚಿತರು ಹಣ ತಂದು ಕೊಡುವಂತೆ ಬೆದರಿಸಿದ್ದರು. ಆರು ಸಾವಿರ ರೂ. ಹಣದೊಂದಿಗೆ ಯುವಕ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬಂದಿದ್ದ. ಆಟೋದಲ್ಲಿ ಬಂದ ಯುವಕರಿಗೆ ಹಣ ಆರು ಸಾವಿರ ರೂ. ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಒಂದೂವರೆ ಲಕ್ಷ ರೂ. ಹಣ ನೀಡುವಂತೆ ಆಗ್ರಹಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆಪಾದಿಸಲಾಗಿದೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ, ಏನಿದು ರ‍್ಯಾಪಿಡೋ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















