SHIVAMOGGA LIVE NEWS | 27 DECEMBER 2024
ಶಿವಮೊಗ್ಗ : ಬಾವಿಯಲ್ಲಿ ಈಜಲು (swim) ತೆರಳಿದ್ದ ಬಾಲಕ ನಾಪತ್ತೆಯಾಗಿದ್ದಾನೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಘಟನೆ ನಡೆದಿದೆ. ಆಫ್ನಾನ್ ನಾಪತ್ತೆಯಾಗಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಆಫ್ನಾನ್ ಸೇರಿ ಮೂವರು ಬಾಲಕರು ಬಾವಿಯಲ್ಲಿ ಈಜಲು ತೆರಳಿದ್ದರು. ಈ ಸಂದರ್ಭ ಆಫ್ನಾನ್ ನಾಪತ್ತೆಯಾಗಿದ್ದಾನೆ. ಬಾವಿ ಬಳಿ ಬಾಲಕನ ಚಪ್ಪಲಿ ಮತ್ತು ಬಟ್ಟೆ ಪತ್ತೆಯಾಗಿದೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಬಾಲಕನಿಗಾಗಿ ಹುಡುಕಾಟ ನಡೆಸಿದರು. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಆನಂದಪುರ ಬಳಿ ಕಾಡಾನೆಗಳು ಪ್ರತ್ಯಕ್ಷ, ತೋಟ, ಗದ್ದೆಯಲ್ಲಿ ಸಂಚಾರ