ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 MAY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಸ್ವಾಮಿ ವಿವೇಕಾನಂದ ಬಡಾವಣೆಯ ಶ್ರೀ ನಾಗಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದೆ. ಈ ಹಿನ್ನೆಲೆ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇಗುಲದ ಪ್ರಧಾನ ಅರ್ಚಕ ಸಂದೇಶ್ ಉಪಾಧ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 12ರಂದು ಸಂಜೆ 6ಕ್ಕೆ ವಿದ್ವಾನ್ ವಸಂತಭಟ್ಟರ ನೇತೃತ್ವದಲ್ಲಿ ಪಂಚವಿಂಶತಿ ದ್ರವ್ಯಕಲಶ ಸಹಿತ ಅಷ್ಟೋತ್ತರ ಪರಿಕಲಶ ಮತ್ತು ಬ್ರಹ್ಮಕಲಶ ಸ್ಥಾಪನೆ ನೆರವೇರಿಸಲಾಗುತ್ತದೆ. ರಾತ್ರಿ 8.30ಕ್ಕೆ ಮಹಾಮಂಗಳಾರತಿ ನಡೆಯಲಿದೆ. ಮೇ 13ರಂದು ಬೆಳಗ್ಗೆ 7 ಗಂಟೆಗೆ ಕುಲದೇವತಾ ಪ್ರಾರ್ಥನೆ, ಗುರು-ಗಣೇಶ ಪೂಜೆ, ಕಲಾತತ್ವ ಹೋಮ, ಅಧಿವಾಸ ಹೋಮ ನಡೆಯಲಿದೆ. ಬೆಳಗ್ಗ 11ಕ್ಕೆ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸ್ವಾಮೀಜಿ ಬ್ರಹ್ಮಕಲಶಾಭಿಷೇಕ ನೆರವೇರಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಆಶೀರ್ವಚನ ನಡೆಯಲಿದೆ. ನಂತರ ಸಮೂಹಿಕ ಅನ್ನಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು. ಹೆಚ್ಚಿನ ಮಾಹಿತಿಗೆ ಭಕ್ತರು 9964597654 ಸಂಪರ್ಕಿಸಬಹುದು.
ಇದನ್ನೂ ಓದಿ – ಕಾರಣಗಿರಿಯಲ್ಲಿ ವೈಭವದ ಸಿದ್ಧಿವಿನಾಯಕ ಸ್ವಾಮಿ ರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ