SHIVAMOGGA LIVE NEWS | 16 MARCH 2023
SHIMOGA : ಮಲವಗೊಪ್ಪದ ಶ್ರೀ ಚನ್ನವಸವೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು (Brahma Rathotsava) ವಿಜೃಂಭಣೆಯಿಂದ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು.
ಬುಧವಾರ ಮಲವಗೊಪ್ಪದಲ್ಲಿ ಬ್ರಹ್ಮ ರಥೋತ್ಸವ (Brahma Rathotsava) ನಡೆಯಿತು. ಮಲವಗೊಪ್ಪದ ಸುತ್ತಮುತ್ತಲ ಬಡಾವಣೆ ಮತ್ತು ಗ್ರಾಮಗಳಿಂದ ಜನರು ಆಗಮಿಸಿದ್ದರು. ರಥೋತ್ಸವದ ವೇಳೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರು ದೇವರ ಘೋಷಣೆಗಳನ್ನು ಕೂಗಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾಧಿಕಾರಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಮಾ.18ರಂದು ಎಲ್ಲಿ ವಾಸ್ತವ್ಯ ಮಾಡಲಿದ್ದಾರೆ ಡಿಸಿ?
ಇದಕ್ಕೂ ಮೊದಲು ಅರ್ಚಕರ ಮನೆಯಲ್ಲಿ ಶ್ರೀ ಚನ್ನಬಸವೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಪೂಜೆ, ಬಾಸಿಂಗ ಧಾರಣೆ, ಮಹಾ ಮಂಗಳಾರತಿ ನೆರವೇರಿಸಲಾಯಿತು. ಭಕ್ತರಿಗೆ ಪ್ರಸಾದ ವಿನಿಯೋಗದ ಬಳಿಕ ರಾಜಬೀದಿ ಉತ್ಸವ ನೆರವೇರಿಸಲಾಯಿತು.