ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಕೋಟೆ ಪೊಲೀಸ್‌ ಠಾಣೆ ರಸ್ತೆಯಲ್ಲಿರುವ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗುರುವಾರ ಬ್ರಹ್ಮರಥೋತ್ಸವ (Brahma Ratotsava) ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದ ಭಕ್ತರು ದೇವಿಯ ಘೋಷಣೆ ಕೂಗುತ್ತ ರಥವನ್ನು ಎಳೆದು ಪುನೀತರಾದರು.

ಬ್ರಹ್ಮರಥೋತ್ಸವ ಹಿನ್ನೆಲೆ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ (Temple) ಮೂರು ದಿನ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಬುಧವಾರ ದೇವಸ್ಥಾನದಲ್ಲಿ ಮಹಾಗಣಪತಿ ಪೂಜೆ, ಕಲಶಸ್ಥಾಪನೆ, ಚಂಡಿಕಾ ಪಾರಾಯಣ, ದುರ್ಗಾ ಜಪ, ರಾಜಬೀದಿ ಉತ್ಸವ, ಪ್ರಾಕಾರೋತ್ಸವ ನಡೆದಿತ್ತು. ಗುರುವಾರ ಬ್ರಹ್ಮರಥೋತ್ಸವ ನಡೆಯಿತು. ಬಳಿಕ ಆಚಾರ್ಯತ್ರಯ ಭವನದಲ್ಲಿ ಗುರುಪಾದುಕಾ ಪೂಜೆ ಮತ್ತು ಪ್ರಸಾದ ವಿನಿಯೋಗ ನಡೆಸಲಾಯಿತು.

Brahma-Ratotsava-held-at-Kote-Chandika-durga-parameshwari-temple

ಇದನ್ನೂ ಓದಿ » ಮಂಗಳೂರು ವಲಯ ಮಟ್ಟದ ಯುವಜನೋತ್ಸವ, ಶಿವಮೊಗ್ಗದ ಕಾಲೇಜು ಚಾಂಪಿಯನ್‌

ಇಂದು ತೀರ್ಥಸ್ನಾನ, ದುರ್ಗಾಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ ಪ್ರಸಾದ ವಿನಿಯೋಗ ನಡೆಯಲಿದೆ. ಬ್ರಹ್ಮರಥೋತ್ಸವ ಅಂಗವಾಗಿ ಕೋಟೆ ಪೊಲೀಸ್‌ ಠಾಣೆ ರಸ್ತೆಯಲ್ಲಿ ಅಂಗಡಿ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ಮಂಡಕ್ಕಿ ಖಾರ, ತಿನಿಸುಗಳು, ಅಲಂಕಾರಿಕ ವಸ್ತುಗಳು, ನಾವೆಲ್ಟಿ ಉತ್ಪನ್ನಗಳು ಮಾರಾಟ ನಡೆಯಿತು.

ಇದನ್ನೂ ಓದಿ » ಶಿವಮೊಗ್ಗದ ಸುಗುಣಾ ಸತೀಶ್‌ಗೆ ಅಪರ್ಣ ನಿರೂಪಣಾ ರತ್ನ ಪ್ರಶಸ್ತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment