ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020
ವಿದೇಶದಿಂದ ಶಿವಮೊಗ್ಗಕ್ಕೆ ಹಿಂತಿರುಗಿದ್ದ ನಾಲ್ವರಲ್ಲಿ ರೂಪಾಂತರಿ ಕರೋನ ವೈರಸ್ ಕಾಣಿಸಿಕೊಂಡಿದೆ. ಹಾಗಾಗಿ ಅವರ ಮನೆಯನ್ನು ಇವತ್ತು ಮತ್ತೊಮ್ಮೆ ಸ್ಯಾನಿಟೈಸ್ ಮಾಡಲಾಯಿತು.
ಟೈಮ್ ಲೈನ್
ಡಿಸೆಂಬರ್ 22 : ರಾತ್ರಿ ಬ್ರಿಟನ್‍ನಿಂದ ನಾಲ್ಕು ಮಂದಿ ಶಿವಮೊಗ್ಗಕ್ಕೆ ಬಂದಿದ್ದರು.
ವೀರ ಸಾವರ್ಕರ್ ನಗರದಲ್ಲಿರುವ ಮನೆಗೆ ಬಂದಿದ್ದ ಇವರು ಮನೆಯಲ್ಲಿ ರಾತ್ರಿ ಉಳಿದಿದ್ದರು.
ಡಿಸೆಂಬರ್ 23 : ಬೆಳಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಇವರನ್ನು ಕರೋನ ಪರೀಕ್ಷೆಗೆ ಒಳಪಡಿಸಿದಾಗ, ಸೋಂಕು ದೃಢಪಟ್ಟಿತ್ತು.
ಪಾಸಿಟಿವ್ ಬಂದ ಹಿನ್ನೆಲೆ ಬ್ರಿಟನ್‍ನಿಂದ ಬಂದಿದ್ದ ನಾಲ್ವರ ಸ್ಯಾಂಪಲ್‍ಗಳನ್ನು ಬೆಂಗಳೂರಿಗೆ ಕಳುಹಿಸಲಾಯಿತು.
ಅದೇ ದಿನ ಮನೆಯನ್ನು ಸೀಲ್ ಡೌನ್ ಮಾಡಿ, ಸ್ಯಾನಿಟೈಸ್ ಮಾಡಲಾಯಿತು.
ಪ್ರಾಥಮಿಕ ಸಂಪರ್ಕದಲ್ಲಿ ಇರುವವರನ್ನು ಕರೋನ ಪರೀಕ್ಷೆಗೆ ಒಳಪಡಿಸಲಾಯಿತು.
ಡಿಸೆಂಬರ್ 23ರಿಂದ ಜನವರಿ 5ರವರೆಗೆ ಯಾರೂ ಮನೆ ಪ್ರವೇಶಿಸದಂತೆ ಗೇಟ್ ಮುಂದೆ ಸ್ಟಿಕ್ಕರ್ ಅಂಟಿಸಲಾಗಿದೆ.
ಇದನ್ನೂ ಓದಿ | BREAKING NEWS | ಶಿವಮೊಗ್ಗದ ನಾಲ್ಕು ಮಂದಿಯಲ್ಲಿ ರೂಪಾಂತರಿ ಕರೋನ ವೈರಸ್ ಪತ್ತೆ
ಡಿಸೆಂಬರ್ 30 : ಎರಡು ಹಂತದ ಪರಿಶೀಲನೆ ಬಳಿಕ, ಈ ಮನೆಗೆ ಬಂದಿದ್ದ ನಾಲ್ವರಿಗೆ ರೂಪಾಂತರಿ ಕರೋನ ವೈರಸ್ ತಗುಲಿರುವುದು ದೃಢವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಘೋಷಣೆ ಮಾಡಿದರು.
ರೂಪಾಂತರಿ ಕರೋನ ತಗುಲಿರುವುದರಿಂದ ವೀರ ಸಾವರ್ಕರ್ ನಗರದಲ್ಲಿರುವ ಮನೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಮತ್ತೊಮ್ಮೆ ಸ್ಯಾನಿಟೈಸ್ ಮಾಡಲಾಯಿತು.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಬ್ರಿಟನ್ ವೈರಸ್, ಆರೋಗ್ಯ ಇಲಾಖೆ ಅಧಿಕಾರಿಗಳ ಮುಂಜಾಗ್ರತೆಯಿಂದ ತಪ್ಪಿತು ದೊಡ್ಡ ಅನಾಹುತ
ವೈರಸ್‍ನ ಗುಣಲಕ್ಷಣ, ಜನರು ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕುರಿತು ಮಹಾನಗರ ಪಾಲಿಕೆ ವತಿಯಿಂದ ಸಾರ್ವಕರ್ ನಗರದಲ್ಲಿ ಮೈಕ್ ಮೂಲಕ ಅನೌನ್ಸ್ ಮಾಡಲಾಯಿತು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422