ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 20 ಫೆಬ್ರವರಿ 2020
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 78 ನೇ ಜನ್ಮ ದಿನದ ಪ್ರಯುಕ್ತ ವೀರಶೈವ ಕಲ್ಯಾಣ ಮಂದಿರದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪ್ರೇರಣಾ ಎಜುಕೇಷನಲ್ ಮತ್ತು ಸೋಷಿಯಲ್ ಟ್ರಸ್ಟ್, ಸಹ್ಯಾದ್ರಿ ನಾರಾಯಣ ಹೃದಯಾಲಯದ ಆಶ್ರಯದಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಫೆಬ್ರವರಿ 27 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿರುವ ಆರೋಗ್ಯ ಶಿಬಿರ ನಡೆಯಲಿದೆ. ಶಿವಮೊಗ್ಗ ಮಾತ್ರವಲ್ಲದೆ ಬೇರೆ ಜಿಲ್ಲೆಯವರೂ ಆರೋಗ್ಯ ಶಿಬಿರದಲ್ಲಿ ಭಾಗಿಯಾಗಬಹುದು ಎಂದರು.
ಉಚಿತ ಆಯುಷ್ಮಾನ್ ಕಾರ್ಡ್
300 ಕ್ಕೂ ಹೆಚ್ಚು ಬಾಪೂಜಿ ಸೇವಾ ಕೇಂದ್ರ ಮತ್ತು ಶಿವಮೊಗ್ಗದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತವಾಗಿ ಒಂದು ಲಕ್ಷ ಜನರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಲಾಗುವುದು. ಸರ್ಕಾರಕ್ಕೆ ಭರಿಸಬೇಕಿರುವ ಶುಲ್ಕವನ್ನು ಪ್ರೇರಣಾ ಎಜುಕೇಷನ್ ಟ್ರಸ್ಟ್ ಭರಿಸಲಿದೆ. ಫೆಬ್ರವರಿ 27, 28 ಮತ್ತು 29 ರಂದು ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಲಾಗುತ್ತದೆ ಎಂದರು.
ಉದ್ಯೋಗ ಮೇಳ ಉದ್ಘಾಟಿಸಲಿದ್ದಾರೆ ಸಿಎಂ
ಇನ್ನು, ಫೆಬ್ರವರಿ 24 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಆ ದಿನ ಬೆಳಗ್ಗೆ 9 ಗಂಟೆಗೆ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಉದ್ಯೋಗ ಮೇಳದಲ್ಲಿ ನೂರಾರು ಕಂಪನಿಗಳು ಇದರಲ್ಲಿ ಭಾಗಿಯಾಗಲಿವೆ ಎಂದು ರಾಘವೇಂದ್ರ ತಿಳಿಸಿದರು.
ಸೊರಬ ನೀರಾವರಿ ಯೋಜನೆಗೆ ಶಂಕುಸ್ಥಾಪನೆ
ಅದೇ ದಿನ ಹನ್ನೊಂದು ಗಂಟೆಗೆ ಸೊರಬದಲ್ಲಿ ಮೂಗೂರು ಮತ್ತು ಮೂಡಿ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಶಿಕಾರಿಪುರದಲ್ಲಿ ಶಿಕಾರಿಪುರ ತಾಲೂಕಿನ ನೀರಾವರಿ ಯೋಜನೆಗಳಿಗೂ ಶಂಕುಸ್ಥಾಪನೆ ನೆರವೇರಲಿದೆ ಎಂದರು ರಾಘವೇಂದ್ರ ತಿಳಿಸಿದರು.
ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ದತ್ತಾತ್ರಿ, ಜ್ಞಾನೇಶ್ವರ್, ರೈಲ್ವೆ ಸಲಹಾ ಸಮಿತಿ ಮಲ್ತೇಶ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]