ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 ಮಾರ್ಚ್ 2022
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇವತ್ತು ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಸರ್ಕಾರದ ವತಿಯಿಂದ 25 ಲಕ್ಷ ರೂ. ಮೊತ್ತದ ಚೆಕ್ ವಿತರಣೆ ಮಾಡಿದರು.
ಸೀಗೆಹಟ್ಟಿಯಲ್ಲಿ ಇರುವ ಹರ್ಷ ಮನೆಗೆ ಯಡಿಯೂರಪ್ಪ ಅವರು ಭೇಟಿ ನೀಡಿ, ಕುಟುಂಬದವರ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದರು.
ಯಡಿಯೂರಪ್ಪ ಹೇಳಿದ್ದೇನು?
» ‘ಹರ್ಷ, ಜನರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು ಹಿಂದೂ ಯುವ ಮುಖಂಡನಾಗಿ ಬೆಳೆಯುತ್ತಿದ್ದ. ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗದೆ ಅಮಾನುಷವಾಗಿ ಹತ್ಯೆ ಮಾಡಿದ್ದಾರೆ.’
» ‘ಸರ್ಕಾರದ ಕಡೆಯಿಂದ 25 ಲಕ್ಷ ರೂ. ಚೆಕ್ ಅನ್ನು ಕುಟುಂಬದವರಿಗೆ ಕೊಟ್ಟಿದ್ದೇವೆ. ಹಣ ಮುಖ್ಯವಲ್ಲ. ಹರ್ಷನನ್ನು ಕಳೆದುಕೊಂಡು ಆ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದಷ್ಟೆ ಹೇಳಬಹುದು’
» ‘ನಮ್ಮದು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆ ಒಂದೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಂದೇ ತಾಯಿ ಮಕ್ಕಳ ಹಾಗೆ ಬಾಳಬೇಕು. ಸಣ್ಣಪುಟ್ಟ ಕಾರಣಕ್ಕೆ ಈ ರೀತಿ ಕೊಲೆ, ಗೊಂದಲ ಉಂಟು ಮಾಡುವುದರಿಂದ ಶಾಂತಿ, ಸುವ್ಯವಸ್ಥೆ ಹಾಳಾಗುತ್ತದೆ. ಇದಕ್ಕೆ ಆಸ್ಪದ ಕೊಡದೆ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬಾಳಬೇಕು.’
» ‘ಇಂತಹ ದುರ್ಘಟನೆಗಳು ಪುನರಾವರ್ತನೆ ಆಗದಂತೆ ಎಲ್ಲರೂ ಎಚ್ಚರ ವಹಿಸಬೇಕಿದೆ’
ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಮುಖಂಡರು ಈ ಸಂದರ್ಭ ಉಪಸ್ಥಿತರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















