ಶಿವಮೊಗ್ಗದಲ್ಲಿ ಸಿಹಿ ಹಂಚುತ್ತಿದ್ದ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯಿಂದ ಗೊಂದಲ, ಪೊಲೀಸ್‌ ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 JANUARY 2024

SHIMOGA : ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನೆಲೆ ಸಿಹಿ ಹಂಚುವ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಅಲ್ಲಾ ಹು ಅಕ್ಬರ್‌ ಎಂದು ಘೋಷಣೆ ಕೂಗಿದ್ದು ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

ಶಿವಪ್ಪನಾಯಕ ಪ್ರತಿಮೆ ಸಮೀಪ ಹಿಂದೂ ಸಂಘಟನೆಗಳ ಕಾರ್ಯಕರ್ತರು ಲಡ್ಡು ಹಂಚುತ್ತಿದ್ದರು. ಇದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ಹಾಗಾಗಿ ಜನರು ಮುಂದೆ ಸಾಗುವಂತೆ ಪೊಲೀಸರು ತಿಳಿಸುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಬುರ್ಖಾ ಧರಿಸಿದ್ದ ಮಹಿಳೆಗೂ ಮುಂದೆ ಸಾಗುವಂತೆ ಸೂಚಿಸಿದರು. ಆಗ ಆಕ್ರೋಶಗೊಂಡ ಮಹಿಳೆ ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸಿದ್ದಾರೆ. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಮಹಿಳೆ ಅಲ್ಲಾ ಹು ಅಕ್ಬರ್‌ ಎಂದು ಘೋಷಣೆ ಕೂಗಿದ್ದಾರೆ. ಕೂಡಲೆ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದರು.

ಇದನ್ನೂ ಓದಿ – ಪೆನ್ಸಿಲ್‌ ಲೆಡ್‌ನಲ್ಲಿ 1 ಸೆಂಟಿ ಮೀಟರ್‌ನ ರಾಮ ಮಂದಿರ ನಿರ್ಮಿಸಿದ ಭದ್ರಾವತಿ ಯುವಕ, ಹೇಗಿದೆ? ನಿರ್ಮಿಸಿದ್ದು ಹೇಗೆ?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment