ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಫೆಬ್ರವರಿ 2022
ಕರ್ಫ್ಯೂ ಸಡಿಲಗೊಳಿಸಿದ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಹಳಿಗೆ ಬಂದಿದೆ. ನಗರ ಸಾರಿಗೆ ಬಸ್ಸುಗಳು ಸಂಚಾರ ಆರಂಭಿಸಿವೆ. KSRTC ಮತ್ತು ಖಾಸಗಿ ಬಸ್ಸುಗಳಲ್ಲಿ ಹೆಚ್ಚು ಪ್ರಯಾಣಿಕರು ಕಾಣಿಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸೋಮವಾರದಿಂದ ಶಿವಮೊಗ್ಗ ನಗರ ಸಾರಿಗೆ ಬಸ್ಸುಗಳು ಸಂಚಾರ ನಿಲ್ಲಿಸಿದ್ದವು. ಇವತ್ತು ಬೆಳಗ್ಗೆಯಿಂದ ಬಸ್ ಸಂಚಾರ ಪುನಾರಂಭವಾಗಿದೆ. ನಗರದ ವಿವಿಧೆಡೆ ಬಸ್ಸುಗಳು ಸಂಚರಿಸಿದವರು. ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಗಾಂಧಿ ಬಜಾರ್ ಸೇರಿದಂತೆ ವಿವಿಧ ಮಾರುಕಟ್ಟೆಗೆ ಭೇಟಿ ನೀಡುವವರು ಈ ನಗರ ಸಾರಿಗೆ ಬಸ್ಸುಗಳನ್ನು ಅವಲಂಬಿಸಿದ್ದರು.
ಖಾಸಗಿ ಬಸ್ಸುಗಳು : ದೂರದ ಊರುಗಳಿಗೆ ತೆರಳುವ ಖಾಸಗಿ ಬಸ್ಸುಗಳಲ್ಲಿಯು ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿತ್ತು. ಕರ್ಫ್ಯೂ ಜಾರಿಯಾದ ಬಳಿಕ ಸರ್ಕಾರಿ ಉದ್ಯೋಗಿಗಳು, ವಿವಿಧ ಸಂಸ್ಥೆಯ ಉದ್ಯೋಗಿಗಳು ಮಾತ್ರ ಬಸ್ಸು ಹತ್ತುತ್ತಿದ್ದರು. ನಿಷೇಧಾಜ್ಞೆ ಸಡಿಲಗೊಂಡ ಹಿನ್ನೆಲೆ ಬಸ್ಸುಗಳಲ್ಲಿ ಪ್ರಯಾಣಿಕರು ಹೆಚ್ಚಳವಾಗಿದ್ದಾರೆ.
ಸರ್ಕಾರಿ ಬಸ್ಸುಗಳು : ಇತ್ತ ಸರ್ಕಾರಿ ಬಸ್ ನಿಲ್ದಾಣದಲ್ಲಿಯು ಪ್ರಯಾಣಿಕರ ಸಂಖ್ಯೆ ಸಹಜ ಸ್ಥಿತಿಗೆ ಮರಳಿದೆ. ವಿವಿಧೆಡೆಗೆ ತೆರಳುವ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಇತ್ತು.