ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಜನವರಿ 2022
ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ ಸಂದರ್ಭ ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು ರಸ್ತೆಗಿಳಿದಿವೆ. ಸಾರ್ವಜನಿಕ ಸಾರಿಗೆಗೆ ಸರ್ಕಾರ ಅವಕಾಶ ನೀಡಿರುವುದರಿಂದ ಬಸ್ಸುಗಳು ಸಂಚರಿಸುತ್ತಿವೆ. ಆದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆ ಇದೆ.
ಸಿಟಿ ಬಸ್’ಗಳ ಸಂಖ್ಯೆ ಕಡಿಮೆ
ಶಿವಮೊಗ್ಗ ಸಿಟಿ ಬಸ್ಸುಗಳ ಸಂಖ್ಯೆ ಕಡಿಮೆ ಇದೆ. ಬೆರಳೆಣಿಕೆಯಷ್ಟು ಬಸ್ಸುಗಳು ಮಾತ್ರ ಸಂಚರಿಸುತ್ತಿವೆ. ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದರಿಂದ ಕಡಿಮೆ ಬಸ್ಸುಗಳು ಮಾತ್ರ ಸಂಚರಿಸುತ್ತಿವೆ.
ಶಿವಮೊಗ್ಗ – ಭದ್ರಾವತಿ ಬಸ್ ಇದೆ
ಇನ್ನು, ಶಿವಮೊಗ್ಗ – ಭದ್ರಾವತಿ ನಡುವೆ ಸರ್ಕಾರಿ ಬಸ್ಸುಗಳ ಸಂಚಾರವಿದೆ. ಬೆಳಗ್ಗೆಯಿಂದ ನಿರಂತರವಾಗಿ ಬಸ್ಸುಗಳು ಸಂಚರಿಸುತ್ತಿವೆ. ಕಾರ್ಖಾನೆ, ಕಚೇರಿಗಳಿಗೆ ತೆರಳುವ ಪ್ರಯಾಣಿಕರು ಇದ್ದಿದ್ದರಿಂದ ಬೆಳಗಿನ ಅವಧಿಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿತ್ತು. ಆ ಬಳಿಕ ಇಳಿಕೆಯಾಗಿದೆ.
ಸರ್ಕಾರಿ ಬಸ್ ಇದೆ, ಪ್ರಯಾಣಿಕರಿಲ್ಲ
ಶಿವಮೊಗ್ಗದ ಸರ್ಕಾರಿ ಬಸ್ ನಿಲ್ದಾಣದಲ್ಲಿ ದೂರದೂರುಗಳಿಗೆ ತೆರಳುವ ಬಸ್ಸುಗಳು ಸಂಚರಿಸುತ್ತಿವೆ. ಬೇರೆಡೆಯಿಂದಲೂ ಬಸ್ಸುಗಳು ಶಿವಮೊಗ್ಗಕ್ಕೆ ಬರುತ್ತಿವೆ. ಆದರೆ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಕೆಲವು ಬಸ್ಸುಗಳಲ್ಲಿ ಶೇ.25ರಷ್ಟು ಪ್ರಯಾಣಿಕರಿಲ್ಲ. ಸದಾ ಗಿಜಿಗುಡುತ್ತಿದ್ದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಇವತ್ತು ಪ್ರಯಾಣಿಕರಿಗಿಂತಲೂ ಸಿಬ್ಬಂದಿಗಳ ಸಂಖ್ಯೆ ಹೆಚ್ಚಿತ್ತು.
ಖಾಸಗಿ ಬಸ್ ನಿಲ್ದಾಣದಲ್ಲಿ ಹೇಗಿದೆ ಸ್ಥಿತಿ?
ಶಿವಮೊಗ್ಗದಿಂದ ಬೇರೆ ಊರುಗಳಿಗೆ ತೆರಳುವ ಖಾಸಗಿ ಬಸ್ಸುಗಳು ಕೂಡ ರಸ್ತೆಗಿಳಿದಿವೆ. ಆದರೆ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಬಸ್ಸುಗಳಲ್ಲಿ ಕೆಲವೇ ಕೆಲವು ಪ್ರಯಾಣಿರಿದ್ದಾರೆ. ಹಾಗಾಗಿ ಹೆಚ್ಚುವರಿ ಪ್ರಯಾಣಿಕರು ಬರುವವರೆಗೂ ಬಸ್ಸುಗಳು ನಿಲ್ದಾಣದಿಂದ ಹೊರಗೆ ಹೋಗುತ್ತಿಲ್ಲ.
ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಸರ್ಕಾರ ಅನುಮತಿ ನೀಡಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೆ ಅಡೆತಡೆ ಇಲ್ಲದೆ, ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು ಸಂಚರಿಸುತ್ತಿವೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ, ಪೊಲೀಸರಿಂದ ತಪಾಸಣೆ ಶುರು, ವಾಹನಗಳು ಸೀಜ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200