ಶಿವಮೊಗ್ಗದ ಖ್ಯಾತ ಉದ್ಯಮಿ ಭಾರದ್ವಾಜ್ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ ಟಾಪ್ 4 ಸಂಗತಿ ಇಲ್ಲಿದೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | SHIMOGA | 22 ಜೂನ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲೆಯ ಪ್ರಮುಖ ಉದ್ಯಮಿ, ವಾಣಿಜ್ಯ ಮತ್ತು ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತರಾದ ಎಂ.ಭಾರದ್ವಾಜ್ (89) ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ. BUSINESS MAN

ಎಂ.ಭಾರದ್ವಾಜ್ ಅವರ ನಿಧನಕ್ಕೆ ಶಿವಮೊಗ್ಗದ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ಸಾಂಸ್ಕೃತಿಕ ಕ್ಷೇತ್ರ ಕಂಬನಿ ಮಿಡಿದಿದೆ. ಉದ್ಯಮಿಯಾಗಿ ಉಮದ್ಯಕ್ಕಷ್ಟೆ ಸೀಮಿತಗೊಳ್ಳದೆ ಸಾಂಸ್ಕೃತಿಕ ಕ್ಷೇತ್ರ, ಸಾಮಾಜಿಕ ಚಟುವಟಿಕೆಯಲ್ಲಿಯು ಎಂ. ಭಾರದ್ವಾಜ್ ಅವರು ತೊಡಗಿಸಿಕೊಂಡಿದ್ದರು. ಇದೆ ಕಾರಣಕ್ಕೆ ಶಿವಮೊಗ್ಗದಲ್ಲಿ ಅವರು ಚಿರಪರಿಚಿತರಾಗಿದ್ದರು.

ಎಂ. ಭಾರದ್ವಾಜ್ ಅವರ ಕುರಿತು ಟಾಪ್ 4 ಸಂಗತಿ

ಪಾಯಿಂಟ್ 1 – ಶಿವಮೊಗ್ಗದಲ್ಲಿ ಪಾಪ್ಯೂಲರ್ ಸೈಕಲ್ ಮಾರ್ಟ್ ಸ್ಥಾಪಿಸಿ ಹೀರೋ ಸೈಕಲ್ ಮತ್ತು ಹೀರೋ ಹೋಂಡಾ ಮೋಟರ್ ಬೈಕುಗಳ ಮಾರಾಟಗಾರರಾಗಿದ್ದರು. ದಕ್ಷಿಣ ಭಾರತದ ಯಶಸ್ವಿ ಉದ್ಯಮಿ ಎನಿಸಿಕೊಂಡಿದ್ದರು.

ಪಾಯಿಂಟ್ 2 – ಉದ್ಯಮದ ಜೊತೆಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿಯು ತೊಡಿಗಿಸಿಕೊಂಡಿದ್ದರು. ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದರು. 1988ರಿಂದ 10 ವರ್ಷ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿದ್ದರು. ಮಾಚೇನಹಳ್ಳಿ ಕೈಗಾರಿಕ ವಸಾಹತು ಸ್ಥಾಪನೆ, ರೈಲ್ವೆ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಪಾಯಿಂಟ್ 3 – ವಿದ್ಯಾಭಾರತಿ ಟ್ರಸ್ಟ್, ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾಗಿ, ಎಜುಕೇರ್ ಸಂಸ್ಥಾಪಕ ಅಧ್ಯಕ್ಷರಾಗಿದ್ದರು. ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿದ್ದರು. ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿಯು ಸೇವೆ ಸಲ್ಲಿಸಿದ್ದರು. ಭಾರತೀಯ ವಿದ್ಯಾಭವನದ ಶಿವಮೊಗ್ಗ ಶಾಖೆ ಉಪಾಧ್ಯಕ್ಷರಾಗಿದ್ದರು.

ಪಾಯಿಂಟ್ 4 – ಸಾಂಸ್ಕೃತಿಕ ಕ್ಷೇತ್ರದಲ್ಲಿಯು ತೊಡಿಗಿಸಿಕೊಂಡು ಹೆಸರು ಸಂಪಾದಿಸಿದ್ದರು. ತಂದೆ ದೊರೆಸ್ವಾಮಿ ಅಯ್ಯಂಗಾರ್ ಸ್ಮರಣಾರ್ಥ ಟ್ರಸ್ಟ್ ಸ್ಥಾಪಿಸಿದ್ದರು. ಅದರ ಮೂಲಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು. ದೇಶದ ಸಂಗೀತ ದಿಗ್ಗಜರನ್ನು ಕರೆಯಿಸಿ, ಶಿವಮೊಗ್ಗದ ಜನರಿಗೆ ರಸದೌತಣ ಉಣಬಡಿಸಿದ್ದರು.

ಎಂ.ಭಾರದ್ವಾಜ್ ಅವರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಇವತ್ತು ರೋಟರಿ ಚಿತಾಗಾರದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ.

Shimoga Nanjappa Hospital

ಇದನ್ನೂ ಓದಿ – ಪಿಂಚಣಿಗಾಗಿ ಕಾದು ಸುಸ್ತಾಗಿ ಬಿದ್ದ ವೃದ್ಧೆ ಮನೆಗೆ ತಹಶೀಲ್ದಾರ್ ಭೇಟಿ, ವಿಎಗೆ ನೊಟೀಸ್ ಜಾರಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment