SHIVAMOGGA LIVE NEWS, 25 DECEMBER 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ಸೋಗಾನೆ ವಿಮಾನ ನಿಲ್ದಾಣದಿಂದ ಕಾರ್ಗೊ ವಿಮಾನಗಳ (Flight) ಹಾರಾಟಕ್ಕೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು 50 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ರಾಘವೇಂದ್ರ, ಇನ್ನು ಒಂದೂವರೆ ತಿಂಗಳಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಲಭ್ಯವಾಗಲಿದೆ. ವಿಸಿಬಲಿಟಿ ಸಮಸ್ಯೆ ಈಗ ಪರಿಹಾರವಾಗಿದೆ. ಅದರ ಬೆನ್ನಿಗೆ ಕಾರ್ಗೊ ವಿಮಾನಗಳ ಹಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ರೈತರು ಬೆಳೆದ ಬೆಳೆ ಮತ್ತು ಇತರೆ ವಸ್ತುಗಳ ರಫ್ತು ಮಾಡಲು ಅನುಕೂಲ ಆಗಲಿದೆ. ಪೂರಕ ವ್ಯವಸ್ಥೆಗೆ 50 ಕೋಟಿ ರೂ. ಬಿಡುಗಡೆಯಾಗಿದೆ ಎಂದು ತಿಳಿಸಿದರು.

ವರದಿಯೊಂದರ ಪ್ರಕಾರ ಕಳೆದ ಒಂದು ವರ್ಷದಲ್ಲಿ 8500ಕ್ಕೂ ಹೆಚ್ಚು ಪ್ರವಾಸಿಗರು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಓಡಾಡಿದ್ದಾರೆ. ಈ ಅವಧಿಯಲ್ಲಿ ಮೈಸೂರು ವಿಮಾನ ನಿಲ್ದಾಣದಿಂದ 7500 ಪ್ರವಾಸಿಗರು ಮಾತ್ರ ಓಡಾಡಿದ್ದಾರೆ. ಹಾಗಾಗಿ ಮೈಸೂರಿಗಿಂತಲು ಹೆಚ್ಚು ಪ್ರವಾಸಿಗರು ನಮ್ಮ ವಿಮಾನ ನಿಲ್ದಾಣದವನ್ನು ಬಳಸಿದ್ದಾರೆ. ಆದ್ದರಿಂದ ಈ ವಿಮಾನ ನಿಲ್ದಾಣದ ಮಧ್ಯ ಕರ್ನಾಟಕದ ಪ್ರಮುಖ ವಿಮಾನ ನಿಲ್ದಾಣವಾಗಲಿದೆ ಎಂದರು.

ಮುಂಬೈ ವಿಮಾನ ನಿಲ್ದಾಣದಲ್ಲಿ ಟ್ರಾಫಿಕ್ ಕ್ಲಿಯರೆನ್ಸ್ ಲಭಿಸಿಲ್ಲ. ಹಾಗಾಗಿ ಇಂಡಿಗೋ ವಿಮಾನಯಾನ ಸಂಸ್ಥೆ ಶಿವಮೊಗ್ಗದಿಂದ ದೆಹಲಿ, ಅಹಮದಾಬಾದ್, ಪುಣೆ ಮಾರ್ಗದಲ್ಲಿ ವಿಮಾನಯಾನ ಆರಂಭಕ್ಕೆ ಅನುಮತಿ ಕೇಳಿದೆ. ಈ ಸಂಬಂಧ ವಿಮಾನಯಾನ ಸಚಿವರಿಗೆ ಪತ್ರ ಬರೆದು ಆದಷ್ಟು ಬೇಗ ಅನುಮತಿ ನೀಡುವಂತೆ ಮನವಿ ಮಾಡಲಾಗುತ್ತದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು. ಇಲ್ಲಿದೆ ಸಂಸದ ರಾಘವೇಂದ್ರ ಅವರ ಹೇಳಿಕೆಯ ವಿಡಿಯೋ
ಇದನ್ನೂ ಓದಿ » ನಟ ಶಿವರಾಜ್ ಕುಮಾರ್‌ಗಾಗಿ ಶಿವಮೊಗ್ಗದಲ್ಲಿ ಪೂಜೆ, ಸಿಗಂದೂರಿನಲ್ಲಿ ಹೋಮ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





