ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಅಪ್‌ಡೇಟ್‌ ನೀಡಿದ ಸಂಸದ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS, 25 DECEMBER 2024

ಶಿವಮೊಗ್ಗ : ಸೋಗಾನೆ ವಿಮಾನ ನಿಲ್ದಾಣದಿಂದ ಕಾರ್ಗೊ ವಿಮಾನಗಳ (Flight) ಹಾರಾಟಕ್ಕೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು 50 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ರಾಘವೇಂದ್ರ, ಇನ್ನು ಒಂದೂವರೆ ತಿಂಗಳಲ್ಲಿ ನೈಟ್‌ ಲ್ಯಾಂಡಿಂಗ್‌ ಸೌಲಭ್ಯ ಲಭ್ಯವಾಗಲಿದೆ. ವಿಸಿಬಲಿಟಿ ಸಮಸ್ಯೆ ಈಗ ಪರಿಹಾರವಾಗಿದೆ. ಅದರ ಬೆನ್ನಿಗೆ ಕಾರ್ಗೊ ವಿಮಾನಗಳ ಹಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ರೈತರು ಬೆಳೆದ ಬೆಳೆ ಮತ್ತು ಇತರೆ ವಸ್ತುಗಳ ರಫ್ತು ಮಾಡಲು ಅನುಕೂಲ ಆಗಲಿದೆ. ಪೂರಕ ವ್ಯವಸ್ಥೆಗೆ 50 ಕೋಟಿ ರೂ. ಬಿಡುಗಡೆಯಾಗಿದೆ ಎಂದು ತಿಳಿಸಿದರು.

1-lakh-views

ವರದಿಯೊಂದರ ಪ್ರಕಾರ ಕಳೆದ ಒಂದು ವರ್ಷದಲ್ಲಿ 8500ಕ್ಕೂ ಹೆಚ್ಚು ಪ್ರವಾಸಿಗರು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಓಡಾಡಿದ್ದಾರೆ. ಈ ಅವಧಿಯಲ್ಲಿ ಮೈಸೂರು ವಿಮಾನ ನಿಲ್ದಾಣದಿಂದ 7500 ಪ್ರವಾಸಿಗರು ಮಾತ್ರ ಓಡಾಡಿದ್ದಾರೆ. ಹಾಗಾಗಿ ಮೈಸೂರಿಗಿಂತಲು ಹೆಚ್ಚು ಪ್ರವಾಸಿಗರು ನಮ್ಮ ವಿಮಾನ ನಿಲ್ದಾಣದವನ್ನು ಬಳಸಿದ್ದಾರೆ. ಆದ್ದರಿಂದ ಈ ವಿಮಾನ ನಿಲ್ದಾಣದ ಮಧ್ಯ ಕರ್ನಾಟಕದ ಪ್ರಮುಖ ವಿಮಾನ ನಿಲ್ದಾಣವಾಗಲಿದೆ ಎಂದರು.

MP-BY-raghavendra-about-Shimoga-Airport-Flight

ಮುಂಬೈ ವಿಮಾನ ನಿಲ್ದಾಣದಲ್ಲಿ ಟ್ರಾಫಿಕ್‌ ಕ್ಲಿಯರೆನ್ಸ್‌ ಲಭಿಸಿಲ್ಲ. ಹಾಗಾಗಿ ಇಂಡಿಗೋ ವಿಮಾನಯಾನ ಸಂಸ್ಥೆ ಶಿವಮೊಗ್ಗದಿಂದ ದೆಹಲಿ, ಅಹಮದಾಬಾದ್‌, ಪುಣೆ ಮಾರ್ಗದಲ್ಲಿ ವಿಮಾನಯಾನ ಆರಂಭಕ್ಕೆ ಅನುಮತಿ ಕೇಳಿದೆ. ಈ ಸಂಬಂಧ ವಿಮಾನಯಾನ ಸಚಿವರಿಗೆ ಪತ್ರ ಬರೆದು ಆದಷ್ಟು ಬೇಗ ಅನುಮತಿ ನೀಡುವಂತೆ ಮನವಿ ಮಾಡಲಾಗುತ್ತದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು. ಇಲ್ಲಿದೆ ಸಂಸದ ರಾಘವೇಂದ್ರ ಅವರ ಹೇಳಿಕೆಯ ವಿಡಿಯೋ 

ಇದನ್ನೂ ಓದಿ » ನಟ ಶಿವರಾಜ್‌ ಕುಮಾರ್‌ಗಾಗಿ ಶಿವಮೊಗ್ಗದಲ್ಲಿ ಪೂಜೆ, ಸಿಗಂದೂರಿನಲ್ಲಿ ಹೋಮ

Leave a Comment