ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2021
ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸುವ ಸಂಬಂಧ ರಾಜ್ಯದಲ್ಲಿ ದೊಡ್ಡ ಚರ್ಚೆಯಾಗುತ್ತಿದೆ. ಈ ನಡುವೆ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ ನೀಡಿದ್ದು, ಸಿಎಂ ಬದಲಾವಣೆ ಪರ, ವಿರೋಧ ಚರ್ಚೆ ಕುರಿತು ಹೇಳಿಕೆ ನೀಡಿದ್ದಾರೆ.
ಸಂಸದ ರಾಘವೇಂದ್ರ ಹೇಳಿದ್ದೇನು?
ಸಿಎಂ ಬದಲಾವಣೆ ವಿಚಾರ ನಮ್ಮ ನಡುವೆ ಎಲ್ಲಿಯೂ ಚರ್ಚೆಯಾಗಿಲ್ಲ. ಮಾಧ್ಯಮಗಳಲ್ಲಿ ಮಾತ್ರ ಈ ವಿಚಾರ ಚರ್ಚೆಯಾಗುತ್ತಿದೆ. ಊಹಾಪೋಹಗಳು ಹುಟ್ಟಿಕೊಂಡಿವೆ.
ಮಕ್ಕಳಿಗೆ ಸ್ಥಾನಮಾನಕ್ಕಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಟಿವಿ ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ ಯಡಿಯೂರಪ್ಪ ಅವರು 50 ವರ್ಷದ ತಮ್ಮ ರಾಜಕೀಯ ಜೀವನದಲ್ಲಿ, ಸಂಕುಚಿತ, ಸೀಮಿತ ಯೋಚನೆ ಮಾಡಿದವರಲ್ಲ. ಲಕ್ಷಾಂತರ ಕಾರ್ಯಕರ್ತರನ್ನು ಸಂಘಟನೆ ನೀಡಿದ್ದಾರೆ.
ನಾವು ರಾಜಕೀಯವಾಗಿ ಬೆಳೆದಿದ್ದೇವೆ. ಅದಕ್ಕೆ ಕಾರಣವಾಗಿರುವುದು ನಮ್ಮ ಸಂಘಟನೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯಿಂದ ನಾವು ಬೆಳೆದಿದ್ದೇವೆ. ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ಕೊಡಿಸುತ್ತಾರೆ ಅನ್ನುವುದು, ರಾಘವೇಂದ್ರ ಅವರಿಗೆ ಇನ್ನೇನಾದರೂ ಮಾಡುತ್ತಾರೆ ಅನ್ನುವುದೆಲ್ಲ ಸುಳ್ಳು. ಮುಖ್ಯಮಂತ್ರಿ ಸ್ಥಾನದಲ್ಲಿ ಯಡಿಯೂರಪ್ಪ ಅವರು ಮುಂದುವರೆಯುತ್ತಾರೆ. ಕೆಲಸ ಮಾಡುತ್ತಾರೆ.
ಕೆಲವರು ಹುಣಸೆಹಣ್ಣು ಹಿಂಡುವಂತಹ ಕೆಲಸವನ್ನು ಮಾಡುತ್ತಿದ್ದಾರೆ. ಸಂಘಟನೆ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಹಾಗಾಗಿ ಸಿಎಂ ಬದಲಾವಣೆ ವಿಚಾರದಲ್ಲಿ ಯಾರು ಏನೆ ಹೇಳಿದರೂ ಹೆಚ್ಚು ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ.
ಸಿಎಂ ಬದಲಾವಣೆ ವಿಚಾರದಲ್ಲಿ ಪರ, ವಿರೋಧ ಹೇಳಿಕೆಯಿಂದ ಪಕ್ಷದ ಕಾರ್ಯಕರ್ತರಿಗೆ ನೋವಾಗುತ್ತದೆ. ಗಾಯವಾದಾಗ ಸರಿಯಾಗಲು ಸ್ವಲ್ಪ ದಿನ ಬೇಕಾಗುತ್ತದೆ. ವರಿಷ್ಠರು ಸ್ಪಷ್ಟ ಸಂದೇಶ ನೀಡಲು ಕಾಲ ಕೂಡಿ ಬರುತ್ತಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200