ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 FEBRUARY 2023
SHIMOGA : ವಿಮಾನ ನಿಲ್ದಾಣ ನೇಮಕಾತಿ (Airport Jobs) ವಿಚಾರವಾಗಿ ಈತನಕ ಅಧಿಕೃತವಾಗಿ ಯಾವುದೆ ನೇಮಕಾತಿ ಆದೇಶಗಳನ್ನು ಹೊರಡಿಸಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನೇಮಕಾತಿ ಆದೇಶಗಳು ಸುಳ್ಳು. ಈ ಕುರಿತು ಯುವಕರು ಎಚ್ಚರದಿಂದ ಇರುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ ಅವರು, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ಕುರಿತು ಅಧಿಕೃತ ನೇಮಕಾತಿ ಆದೇಶ ಹೊರಡಿಸಿಲ್ಲ. ವಿಮಾನ ನಿಲ್ದಾಣ ಪ್ರಾಧಿಕಾರ (AAI) ತನ್ನಲ್ಲಿರುವ ಸಿಬ್ಬಂದಿಯನ್ನೆ ಬಳಕೆ ಮಾಡಿಕೊಂಡು ವಿಮಾನ ನಿಲ್ದಾಣ (Airport Jobs) ನಿರ್ವಹಣೆ ಮಾಡಲಿದೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸದ ವಿಚಾರ, ಪೋಸ್ಟ್ ವೈರಲ್ ಬೆನ್ನಿಗೆ ಪೊಲೀಸರು ಅಲರ್ಟ್
ನಕಲಿ ಉದ್ಯೋಗ ಜಾಹೀರಾತು ಪ್ರಕಟಿಸಿರುವವರ ವಿರುದ್ಧ ಕ್ರಿಮನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ತಿಳಿಸುತ್ತೇನೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422