ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೃತದೇಹದ ಮೆರವಣಿಗೆ ವೇಳೆ ಗಲಾಟೆಗೆ ನಾವು ಕಾರಣರಲ್ಲ. ಅಂದು ಸೆಕ್ಷನ್ 144 ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ ಅವರು, ಯಾರೂ ಸಹ ಜನರ ಭಾವನೆಗಳ ಜೊತೆ ಚೆಲ್ಲಾಟ ಆಡುವುದಕ್ಕೆ ಬರಲ್ಲ. ತುಂಬಾ ಸೂಕ್ಷ್ಮವಾಗಿ ಎಲ್ಲ ಅಂಶವನ್ನು ತೆಗೆದುಕೊಂಡು ಹೋಗಬೇಕಿತ್ತು. ಈ ಸಂದರ್ಭದಲ್ಲಿ ಜನರ ಆಕ್ರೋಶ ತಡೆಯಲು ಆಗಲಿಲ್ಲ ಎಂದರು.
ಹರ್ಷನ ಅಂತಿಮ ಸಂಸ್ಕಾರ ಶಾಂತಿಯುತವಾಗಿ ನಡೆಯಲು ಎಲ್ಲ ಕ್ರಮ ತೆಗೆದುಕೊಂಡಿದ್ದೆವು. ನಮ್ಮ ನಾಯಕರಾದ ಈಶ್ವರಪ್ಪ ಅವರ ನೇತೃತ್ವದಲ್ಲಿ ಎಲ್ಲರೂ ಒಟ್ಟಾಗಿ ಎಲ್ಲವನ್ನು ನೆರವೇರಿಸುವ ಕ್ರಮ ತೆಗೆದುಕೊಂಡಿದ್ದೆವು. ಪೊಲೀಸ್ ಇಲಾಖೆಯ ಜೊತೆ ಕೈ ಜೋಡಿಸುವ ಕೆಲಸ ಮಾಡಿದ್ದೆವು ಎಂದು ತಿಳಿಸಿದರು.
ಮೆರವಣಿಗೆ ಬೇಡ ಅಂದಿದ್ದರು
ಪೊಲೀಸ್ ಇಲಾಖೆ ಮೆರವಣಿಗೆ ಬೇಡ ಎಂದು ಹೇಳಿದ್ದರು. ಆದರೂ ಅದನ್ನು ಕೇಳುವ ಪರಿಸ್ಥಿತಿಯಲ್ಲಿ ಯಾರೂ ಇರಲಿಲ್ಲ. ನಾವೆಲ್ಲ ಪೊಲೀಸರಿಗೆ ಸಹಕಾರ ನೀಡಿದ್ದೇವೆ ಎಂದು ರಾಘವೇಂದ್ರ ತಿಳಿಸಿದರು.
ಹರ್ಷ ಅವರ ಮೃತದೇಹದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಶಿವಮೊಗ್ಗ ಶಾಂತಿಗೆ ಹೆಸರುವಾಸಿಯಾದ ನಗರ. ಆದರೆ ಕಲ್ಲು ತೂರಾಟದಿಂದ ಕೆಟ್ಟ ಸಂದೇಶ ಹೋಗಿದೆ. ಇದಕ್ಕೆ ಮೂಲ ಕಾರಣರಾದವರನ್ನು ಬಂಧಿಸಬೇಕು. ಕಾನೂನು ರೀತಿಯಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ | ‘ಹತ್ಯೆಗೂ ಮೊದಲು ಹರ್ಷಾಗೆ ವಿಡಿಯೋ ಕಾಲ್’, ಕೊನೆ ಕ್ಷಣವನ್ನು ವಿವರಿಸಿದ ಸ್ನೇಹಿತ