ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021
ಮುಂದಿನ ನಿರ್ಧಾರದವರೆಗೆ ದೇಗುಲಗಳನ್ನು ತೆರವು ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಸಂವಿಧಾನದ ವ್ಯವಸ್ಥೆಯಲ್ಲಿ ನಾವು ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ನಡೆಯುತ್ತಿದ್ದೇವೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಂದಿನ ಚರ್ಚೆವರೆಗೂ ದೇವಾಲಯ ತೆರವು ಮಾಡಬಾರದು ಎಂದು ಆದೇಶಿಸಿದ್ದಾರೆ ಎಂದರು.
ದೇವಾಲಯಗಳ ತೆರವು ವಿಷಯಕ್ಕೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಒದಗಿಸುವ ಕೆಲಸವನ್ನು ನ್ಯಾಯಾಲಯಗಳು ಹಾಗೂ ಸರ್ಕಾರಗಳು ಮಾಡಬೇಕಿದೆ. ಈ ಕೆಲಸ ಶೀಘ್ರದಲ್ಲೇ ನಡೆಯಲಿದೆ ಎಂದು ಹೇಳಿದರು..
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422