ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ: ರಾಜ ಕಾಲುವೆಯ (Raja Kaluve) ಅವೈಜ್ಞಾನಿಕ ನಿರ್ಮಾಣದಿಂದಾಗಿ ಮಳೆ ಹೆಚ್ಚಾದ ಸಂದರ್ಭ ವಿವಿಧೆಡೆ ಮನೆಗಳಿಗೆ ನೀರು ನುಗ್ಗುತ್ತಿದೆ ಎಂದು ಸ್ಥಳೀಯರ ದೂರಿನ ಹಿನ್ನೆಲೆ ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ಶಿವಮೊಗ್ಗದ ಸಾಗರ ರಸ್ತೆಯ ದ್ವಾರಕ ಕನ್ವೆನ್ಷನ್ ಹಾಲ್ ಸಮೀಪ ರಾಜ ಕಾಲುವೆಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ. ಮಳೆ ಹೆಚ್ಚಾದರೆ ಕೊಳಚೆ ನೀರು ಗೋಪಾಲಗೌಡ ಬಡಾವಣೆಯ ಮನೆಗಳಿಗೆ ನುಗ್ಗಿ ಹಾನಿ ಉಂಟಾಗುತ್ತಿದೆ. ಈ ಕುರಿತು ಸ್ಥಳೀಯರು ತಿಳಿಸಿದ್ದರಿಂದ ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಕೊಳಚೆ ನೀರು ಮನೆಗಳಿಗೆ ನುಗ್ಗದ ಹಾಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರ ಪಾಲಿಕೆ ಕಮಿಷನರ್ ಮಾಯಣ್ಣಗೌಡ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಸ್ಥಳೀಯರು ಸೇರಿ ಹಲವರು ಇದ್ದರು.

ಇದನ್ನೂ ಓದಿ » ಸಾಗರ ತಾಲೂಕಿಗೆ ಮತ್ತೆರಡು ಪೊಲೀಸ್ ಠಾಣೆ ಬೇಕು, ಗೃಹ ಸಚಿವರಿಗೆ ಎಂಎಲ್ಎ ಮನವಿ
Raja Kaluve






